
ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿರುವುದು ಖಂಡನೀಯ ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು .
ಶಾಸಕರು ಪ್ರತಿಕ್ರಿಯಿಸಿ ಪ್ರತಿಭಟನಾಕಾರನು ಬಂಧಿಸಿರುವುದು ಖಂಡನೀಯ ಘಟನೆಯಾಗಿದ್ದು, ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದೆ ಸಕಲೇಶಪುರ ತಾಲೂಕಿನಲ್ಲಿ ಕಾಡಾನೆ ದಾಳಿಗೆ ಸಾಕಷ್ಟು ಜನರು ಬಲಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಬೃಹತ್ ಮಟ್ಟದ ಹೋರಾಟವು ಕೂಡ ನಡೆದಿದೆ. ಆದರೆ ಯಾವ ಸರ್ಕಾರವು ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿರುವ ಉದಾಹರಣೆಗಳಿಲ್ಲ ಎಂದರು.
ಕಳೆದ ಬಿಜೆಪಿ ಸರ್ಕಾರದಲ್ಲೂ ಬೃಹತ್ ಮಟ್ಟದ ಹೋರಾಟ ನಡೆದಿದ್ದು, ಮಧ್ಯರಾತ್ರಿ ಎರಡು ಗಂಟೆಯಲ್ಲಿ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಸ್ಥಳಕ್ಕೆ ಆಗಮಿಸಿ ಹೋರಾಟಗಾರರ ಮನವೊಲಿಸುವ ಪ್ರಯತ್ನಕ್ಕೆ ಮುಂದಾಗಿದ್ದರು. ನಂತರ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರವನ್ನು ನೀಡಿದ್ದರು. ಅಂತಹ ಸಂದರ್ಭದಲ್ಲಿಯೇ ಪ್ರತಿಭಟನಾಕಾರರ ಮೇಲೆ ಯಾವ ಕ್ರಮ ಜರುಗಿಸಲಿಲ್ಲ. ಆದರೆ ಸರ್ಕಾರದ ಗಮನ ಸೆಳೆಯಲು ಹೋರಾಟ ಮಾಡಲು ಮುಂದಾದವರ ವಿರುದ್ಧ ಸರ್ಕಾರ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಬಂಧ ನಾನು ತಾಲೂಕಿನಲ್ಲಿ ಎಲ್ಲಾ ಸಂಘ ಸಂಸ್ಥೆಗಳ ಹಾಗೂ ಅದಿಕಾರಿಗಳ ಸಭೆ ನಡೆಸಿ ಆನೆಹಾವಳಿ ಬಗ್ಗೆ ಶಾಶ್ವತ ಪರಿಹಾರಕ್ಕೆ ತೀರ್ಮಾನ ಕೈಗೊಳ್ಳಲಾಗುವುದು.
