ಸಕಲೇಶಪುರ : ಸಕಲೇಶಪುರ ತಾಲ್ಲೂಕಿಗೆ ಉಪಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಬೇಟಿ ನೀಡಿದ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್.

ಇಂದು ತಾಲ್ಲೂಕಿನ ಹೆಬ್ಬನಹಳ್ಳಿ ಗ್ರಾಮದ ವಿಶ್ವೇಶ್ವರಯ್ಯ ಜಲ ಅಭಿವೃದ್ಧಿ ನಿಗಮ ಎತ್ತಿನಹೊಳೆ ಯೋಜನೆಯ ಹೆಬ್ಬನಹಳ್ಳಿ ಸಬ್ ಸ್ಟೇಷನ್ ಪ್ರಗತಿ ಪರಿಶೀಲನೆ ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತುಕತೆ ನಡೆಸಿದರು.

ಉಪ ಮುಖ್ಯ ಮಂತ್ರಿಗಳಾದ ಡಿ. ಕೆ. ಶಿವಕುಮಾರ್. ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಜನಸಂಪನ್ಮೂಲ ಸಚಿವರಾದ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿದರು ಸಂಸದರಾದ ಡಿ.ಕೆ ಸುರೇಶ್, ಪ್ರಜ್ವಲ್ ರೇವಣ್ಣ, ಅರಸೀಕೆರೆ ಶಾಸಕರಾದ ಶಿವಲಿಂಗೇಗೌಡ, ಸಕಲೇಶಪುರ ಕ್ಷೇತ್ರ ಶಾಸಕರಾದ ಸಿಮೆಂಟ್ ಮಂಜುರವರು ಭಾಗಿಯಾಗಿ ಎತ್ತಿನಹೊಳೆ ಕಾಮಗಾರಿಗಳ ಬಗ್ಗೆ ಚರ್ಚೆ ನೆಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿ ರಾಂ ಶಂಕರ್, ಎತ್ತಿನಹೊಳೆ ಯೋಜನೆಯ ವಿವಿದ ಹಂತದ ಅಧಿಕಾರಿಗಳು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *