ಚಂದ್ರಯಾನ-3 ಸಕ್ಸಸ್: ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ

ಚಂದ್ರನ ಮೇಲೆ ಚಂದ್ರಯಾನ-3 ಗಗನ ನೌಕೆಯಿಂದ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿದಿದೆ.
ಇಸ್ರೋ ವಿಜ್ಞಾನಿಗಳು ಹಗಲಿರುಳು ಪಟ್ಟ ಶ್ರಮಕ್ಕೆ ತಕ್ಕ ಫಲ ಇಂದು ಸಿಕ್ಕಿದೆ. ಇದರಿಂದಾಗಿ ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಇಸ್ರೋ ವಿಜ್ಞಾನಿಗಳಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಚಂದ್ರನ ಮೇಲೆ ಚಂದ್ರಯಾನ-3 ಗಗನ ನೌಕೆಯಿಂದ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿದಿದ್ದು ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದರು. ಇಸ್ರೋದಲ್ಲಿ ವಿಜ್ಞಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
