
ಸಕಲೇಶಪುರ : ಹೆತ್ತೂರು ಗ್ರಾಮ ಪಂಚಾಯತ್ ವತಿಯಿಂದ ಇಲ್ಲಿನ ಕೆಪಿಎಸ್ ಶಾಲೆಯ ಪ್ರಾಥಮಿಕ ವಿಭಾಗದ ಶೌಚಾಲಯ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಸೂಯಾ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಚಿನ್ ಹೆಚ್.ಎಂ, ಸದಸ್ಯರಾದ ಹರೀಶ್ ಕರಡಿಗಾಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ವಸೀಮುದ್ದೀನ್, ಕೆಪಿಎಸ್ ಪ್ರಾಂಶುಪಾಲರಾದ ಮಂಜುನಾಥ ಬಿ.ಡಿ, ಉಪಪ್ರಾಂಶುಪಾಲೆ ಲತಾ ಬಿ.ಕೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಸತೀಶ್ ಹೆತ್ತೂರು ಮೊದಲಾದವರು ಉಪಸ್ಥಿತರಿದ್ದರು.




