ಸಕಲೇಶಪುರ : ಹೆತ್ತೂರು – ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಕಳೆದ ಹತ್ತು ವರ್ಷಗಳಿಂದ ಸಮಾಜಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಕೋಲಾರ ಜಿಲ್ಲೆಗೆ ವರ್ಗಾವಣೆಯಾದ ಶ್ರೀಮತಿ ವೇದವತಿ ಕೆ ಅವರಿಗೆ ಬೀಳ್ಕೊಡುಗೆ ಸಮಾರಂಭ ನೆರವೇರಿತು.

ಮುಖ್ಯ ಅತಿಥಿಗಳಾಗಿ ಹೆತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಸೂಯಾ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಚಿನ್ ಹೆಚ್.ಎಂ, ಸದಸ್ಯರಾದ ಹರೀಶ್ ಕರಡಿಗಾಲ, ಕಾಲೇಜು ಅಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಶ್ರೀ ಷಣ್ಮುಖ ಮೊದಲಾದವರು ಭಾಗವಹಿಸಿದ್ದರು.

ವೇದಿಕೆಯಲ್ಲಿ ಹಳೇಬೀಡು ಕಾಲೇಜಿನ ಶ್ರೀ ರಮೇಶ್, ಬೆಂಗಳೂರಿನ ಮಲ್ಲೇಶ್ವರಂ ಕಾಲೇಜಿನ ಶ್ರೀ ರಘು, ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಂಶುಪಾಲ ಮಂಜುನಾಥ ಬಿ.ಡಿ. ಅಧ್ಯಕ್ಷತೆ ವಹಿಸಿದ್ದರು.

ಉಪಪ್ರಾಂಶುಪಾಲೆ ಲತಾ ಬಿ.ಕೆ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಸತೀಶ್ ಮೊದಲಾದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಮಂಜುಳಾ ನಿರೂಪಿಸಿ, ಆಂಗ್ಲ ಭಾಷಾ ಉಪನ್ಯಾಸಕಿ ರೂಪ ಸ್ವಾಗತಿಸಿ, ರಾಜ್ಯಶಾಸ್ತ್ರ ಉಪನ್ಯಾಸಕ ಸಿದ್ದೇಶ್ ವಂದಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *