ಆಲೂರು : ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ಕಾಮತಿ ಗ್ರಾಮದಲ್ಲಿ ಸಂಭವಿಸಿದೆ.

ರತ್ನಮ್ಮ ಕೋಂ ರಂಗಣ್ಣ ಎಂಬುವರ ಮನೆ ಬೆಂಕಿಗೆ ಆಹುತಿಯಾಗಿದ್ದು ಮನೆಯಲ್ಲಿನ ಟಿವಿ,ಹೋಮ್ ಥೀಯಟರ್, ಮಂಚ ಸೇರಿ ಪೀಠೋಪಕರಣಗಳು, ಬೀರುವಿನಲ್ಲಿಟ್ಟಿದ್ದ 30 ಸಾವಿರ ಹಣ ಬಟ್ಟೆಗಳು, ಅಡುಗೆ ಪಾತ್ರೆಗಳು ಸೇರಿ ಲಕ್ಷ ರೂ.ಗಳಿಗೂ ಅಧಿಕ ಹಾನಿಯಾಗಿದೆ ಎಂದು ಕುಟುಂಬದವರು ಅಂದಾಜಿಸಿದ್ದಾರೆ.

ಶನಿವಾರ ಮದ್ಯಾಹ್ನ 3 ಘಂಟೆ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು ಬೆಂಕಿ ಬಿದ್ದ ಸಂದರ್ಭದಲ್ಲಿ ಮನೆಯವರು ಜಮೀನು ಕೆಲಸಕ್ಕೆ ಹೋಗಿದ್ದರು ಎಂದು ತಿಳಿದಿು ಬಂದಿದ್ದು ಪಕ್ಕದ ಮನೆಯವರು ವಿಷಯ ತಿಳಿದು ತಕ್ಷಣ ಅಗ್ನಿಶಾಮಕ ಠಾಣೆಗೆ ಮಾಹಿತಿ ತಿಳಿಸಿದ್ದಾರೆ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿ, ಆಗುವ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಮನೆ ಹಾಗೂ ಮನೆಯಲ್ಲಿದ್ದ ವಸ್ತುಗಳನ್ನು ಕಳೆದುಕೊಂಡು ಕುಟುಂಬ ಬೀದಿಗೆ ಬಿದ್ದಿದೆ ಸರ್ಕಾರ ನೊಂದ ಕುಟುಂಬಸ್ಥರಿಗೆ ಹೆಚ್ಚು ಪರಿಹಾರ ನೀಡುವ ಮೂಲಕ ಮನೆ ನಿರ್ಮಾಣ ಮಾಡಿಕೋಡಬೇಕು ಎಂದು ಒತ್ತಾಯಿಸಿದರು. ಕಂದಾಯ ಇಲಾಖೆ ಹಾಗೂ ಪೋಲಿಸ್ ಅಧಿಕಾರಿಗಳು ಕಾಮತಿ ಗ್ರಾಮಕ್ಕೆ ಬೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *