
ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ಸಕಲೇಶಪುರದ ವತಿಯಿಂದ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ವಿದ್ಯಾರ್ಥಿಗಳಿಗೆ ಆರೋಗ್ಯ ಸೇವೆಗಳು ಮತ್ತು ವಿವಿಧ ರೋಗಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.
ವಿಜೇತರಿಗೆ ಆರೋಗ್ಯ ಇಲಾಖೆ ವತಿಯಿಂದ ನಗದು ಬಹುಮಾನ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ರಾಣಿ ಆರ್, ತಾಲ್ಲೂಕು ಕ್ಷಯ ರೋಗ ಮೇಲ್ವಿಚಾರಕರು ಮಧು ಬಿ.ಈ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಚಿನ್ ಹೆಚ್.ಎಂ, ಸಂಸ್ಥೆಯ ಪ್ರಾಂಶುಪಾಲ ಮಂಜುನಾಥ ಬಿ.ಡಿ., ಉಪನ್ಯಾಸಕರ ವರ್ಗದವರು ಉಪಸ್ಥಿತರಿದ್ದರು.



