
ಬಿಪಿಎಲ್ ಕಾರ್ಡ್ದಾರರಿಗೆ ನೀಡಲಾಗುವ ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಎಲ್ಪಿಜಿ ಸಿಲಿಂಡರ್ಗಳ ಮೇಲೆ ಹೆಚ್ಚುವರಿ 200 ರೂನಷ್ಟು ಸಬ್ಸಿಡಿ ಕೊಡಲು ನಿರ್ಧರಿಸಿದೆ. ಕೇಂದ್ರ ಸಂಪುಟ ಸಭೆಯಲ್ಲಿ ಈ ಕ್ರಮಕ್ಕೆ ಅನುಮೋದನೆ ಸಿಕ್ಕಿದೆ. ತೈಲ ಮಾರುಕಟ್ಟೆ ಕಂಪನಿಗಳು ಶೀಘ್ರದಲ್ಲೇ ಅಧಿಕೃತವಾಗಿ ಇದರ ಘೋಷಣೆ ಮಾಡಲಿದೆ.
ಎಲ್ಪಿಜಿ ಸಿಲಿಂಡರ್ಗಳ ಬೆಲೆ 200 ರೂನಷ್ಟು ಕಡಿಮೆ ಆಗಲಿದೆ 14 ಕಿಲೋ ಎಲ್ಪಿಜಿ ಸಿಲಿಂಡರ್ಗೆ 200 ರೂನಷ್ಟು ಸಬ್ಸಿಡಿ ಒದಗಿಸಲು ಕೇಂದ್ರ ಸಂಪುಟ ಇಂದು ಅನುಮೋದನೆ ನೀಡಿದೆ. ಸದ್ಯ 14 ಕಿಲೋ ಎಲ್ಪಿಜಿ ಸಿಲಿಂಡರ್ ಬೆಲೆ 1,100 ರೂ ಅಸುಪಾಸಿನಲ್ಲಿ ಇದೆ.
ಇದರ ಬೆಲೆ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಬೆಲೆ ಇಳಿಕೆ ಸೌಲಭ್ಯ ಸಿಗಲಿದೆ. ಗ್ಯಾಸ್ ಬೆಲೆ ಕಡಿಮೆ ಆಗಿರುವ ಬಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಶೀಘ್ರದಲ್ಲೇ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.