ಸಕಲೇಶಪುರ : ಅರಣ್ಯ ಇಲಾಖೆ ಶಾರ್ಪ್ ಶೂಟರ್ ವೆಂಕಟೇಶ್ ಮೇಲೆ ದಾಳಿ ನಡೆಸಿದ ಕಾಡಾನೆ ಭೀಮಸಕಲೇಶಪುರ /ಆಲೂರು ತಾಲೂಕಿನಲ್ಲಿ ಗಾಯಗೊಂಡು ಸಂಚರಿಸುತ್ತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿತ್ತು

ಈ ಹಿನ್ನೆಲೆಯಲ್ಲಿ ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಕಾಡಾನೆಗೆ ಅರೆವಳಿಕೆ ಮದ್ಧು ನೀಡಲು ಶಾರ್ಪ್ ಶೂಟರ್ ವೆಂಕಟೇಶ್ ಶೂಟ್ ಮಾಡಿದ್ಧು ಆದರೂ ಏಕ ಏಕಿ ಬಂದ ಕಾಡಾನೆ ವೆಂಕಟೇಶ್ ರವರನ್ನು ತುಳಿದು ಹಾಕಿದ್ದು ಇದರಿಂದ ವೆಂಕಟೇಶ್ ಗಂಭೀರ ಸ್ವರೂಪ ಗಾಯಗೊಂಡಿದ್ಧು ಹಾಸನದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ಈ ದಾಳಿಯಿಂದ ಸಕಲೇಶಪುರ ಹಾಗೂ ಆಲೂರು ತಾಲೂಕಿನ ಜನತೆ ಆತಂಕಗೊಂಡಿದ್ದು ಇದರಿಂದ ಗಾಬರಿಗೊಂಡಿರುವ ಭೀಮ ಕಾಡಾನೆ ಮುಂದೆ ಮತ್ತೊಬ್ಬರ ಮೇಲೆ ದಾಳಿ ನಡೆಸುವ ಮುನ್ನು ಇದನ್ನು ಸೆರೆಹಿಡಿಯಬೇಕು ಎಂಬುದು ನಾಗರೀಕರ ಆಗ್ರಹವಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *