ಸಕಲೇಶಪುರ : ಭಾರತೀಯ ಯುವ ರೆಡ್ ಕ್ರಾಸ್ ಘಟಕ, ಐಕ್ಯೂಎಸಿ ಘಟಕ, ಜೆಎಸ್‌ಎಸ್‌ ಶಿಕ್ಷಣ ಮಹಾವಿದ್ಯಾಲಯ ಸಕಲೇಶಪುರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಹಾಸನ ಮತ್ತು ತಾಲ್ಲೂಕು ಘಟಕ, ಸಕಲೇಶಪುರ, ರೋಟರಿ ಹಾಗೂ ಲಯನ್ಸ್ ಸಂಸ್ಥೆ ಸಕಲೇಶಪುರ ಇವರುಗಳ ಸಹಯೋಗದೊಂದಿಗೆ ಪರಮಪೂಜ್ಯ ಲಿಂಗೈಕ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 108ನೇ ಜಯಂತಿ ಮಹೋತ್ಸವದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಗುರುವಾರ ಬೆಳಗ್ಗೆ 10.30 ಕ್ಕೆ ವಿದ್ಯುಕ್ತವಾಗಿ ಜ್ಯೋತಿ ಬೆಳಗಿಸಿ, ಪರಮಪೂಜ್ಯ ಲಿಂಗೈಕ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಉದ್ಘಾಟಿಸಲಾಯಿತು.

ಈ ಶಿಬಿರದ ಉದ್ಘಾಟಕರಾಗಿ ಆಗಮಿಸಿದ ಶ್ರೀ ಎಸ್.ಎಸ್. ಪಾಷಾ, ನಿರ್ದೇಶಕರು, ಭಾರತೀಯ ರೆಡ್ ಕ್ರಾಸ್‌ ಸಂಸ್ಥೆ ಜಿಲ್ಲಾ ಶಾಖೆ, ಹಾಸನ ರವರು ಉದ್ಘಾಟನೆ ಮಾಡಿ ಮಾತನಾಡಿ ಪರಮಪೂಜ್ಯ ಲಿಂಗೈಕ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 108ನೇ ಜಯಂತಿ ಮಹೋತ್ಸವದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯ, ಇಲ್ಲಿ ಆಯೋಜಿಸಿರುವುದು ಶ್ಲಾಘನೀಯವಾದುದು ಮತ್ತು ಅನುಕರಣೀಯವಾದುದು ಎಂದರು.

ರಕ್ತದಾನ ಮಹಾದಾನವಾಗಿದ್ದು, ಯವಕರು ರಕ್ತದಾನ ಮಾಡಲು ಮುಂದೆ ಬಂದು ಜೀವ ಉಳಿಸುವ ಮಹಾತ್ಕಾರ್ಯಕ್ಕೆ ಕೈಜೋಡಿಸಬೇಕು ಎಂದರು.

ಶ್ರೀ ಸುತ್ತೂರು ಮಠವು ಅನ್ನ, ಅರಿವು, ಆರೋಗ್ಯ, ಸಮಾಜ ಸುಧಾರಣೆ, ಧರ್ಮ ಜಾಗೃತಿಯನ್ನು ಮೂಡಿಸುವ ಸೇವಾ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.

ಈ ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆ ಅದ್ಯಕ್ಷ ಸದಾಶಿವ ಎಸ್‌.ಎಂ., ಲಯನ್ ಅಧ್ಯಕ್ಷೆ ಬಬಿತ ವಿಶ್ವನಾಥ್, , ದೇವರಾಜು ಹೆಚ್.ಎನ್ (ದಿವಾನ್) ಅಧ್ಯಕ್ಷರು, ಮಲೆನಾಡು ವೀರಶೈವ ಸಮಾಜ, ಸಕಲೇಶಪುರ, ಲೋಹಿತ್‌ ಕೌಡಳ್ಳಿ, ಮಾಜಿ ಅಧ್ಯಕ್ಷರು, ಟಿ.ಎ.ಪಿ.ಸಿ.ಎಂ.ಎಸ್. ಸಕಲೇಶಪುರ, ಶಬೀರ್ ಅಹಮದ್‌, ಕಾರ್ಯದರ್ಶಿಗಳು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಹಾಸನ, ಹೆಚ್.ಡಿ ಕುಮಾರ್, ನಿರ್ದೇಶಕರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಹಾಸನ ಶಾರದ ಗುರುಮೂರ್ತಿ, ತಾಲ್ಲೂಕು ಸಭಾಪತಿಗಳು, ತಾಲ್ಲೂಕು ರೆಡ್ ಕ್ರಾಸ್ ಘಟಕ, ಸಕಲೇಶಪುರ ರೇಖಾ ಸುರೇಶ್‌, ತಾಲ್ಲೂಕು ಕಾರ್ಯದರ್ಶಿ ತಾಲ್ಲೂಕು ರೆಡ್‌ ಕ್ರಾಸ್‌ ಘಟಕ, ಸಕಲೇಶಪುರ, ಡಾ ನಾಗಲಕ್ಷ್ಮಿ, ಅಶ್ವತ್ ಹಾಸನ ಜಿಲ್ಲಾಸ್ಪತ್ರೆ ರಕ್ತನಿಧಿ ವಿಭಾಗ, ಹಾಸನ, ಜೆ ಎಸ್ ಎಸ್ ಶಿಕ್ಷಣ ಸಂಸ್ಥೆಗಳ ಎಲ್ಲಾ ಮುಖ್ಯಸ್ಥರುಗಳು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಲೇಜಿನ ಸಿಬ್ಬಂದಿ ವರ್ಗದವರು, ಬಿಎಡ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳು , ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸದ ಎಲ್ಲಾ ಗಣ್ಯರನ್ನು ಡಾ ದಿನೇಶ್ ಎಂ.ಕೆ ಸಹಾಯಕ ಪ್ರಾಧ್ಯಾಪಕರು. ಇವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಹೆಚ್ಚು ಬಾರಿ ರಕ್ತದಾನ ಮಾಡಿದ ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯದ ಕಂಪ್ಯೂಟರ್ ಇನ್‌ಸ್ಪೆಕ್ಟರ್‌ರಾದ ತಮ್ಮಯ್ಯ ಹೆಚ್.ಬಿ, ಇವರನ್ನು ಸನ್ಮಾನಿಸಲಾಯಿತು. ಡಾ ನಂಜುಂಡಪ್ಪ ಎಸ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಬಿಎಡ್ ಪ್ರಶಿಕ್ಷಣಾರ್ಥಿ ಶ್ರೀಮತಿ ಶಿಲ್ಪಶ್ರೀ ಎಸ್ ಎ ಎಲ್ಲರನ್ನು ವಂದಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *