
ಸಕಲೇಶಪುರ : ಕೆಲಗಳಲೆ ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಕೆಲಗಳಲೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.
ಬಿರಡಹಳ್ಳಿ ಗ್ರಾ ಪಂ ಅಧ್ಯಕ್ಷರಾದ ಶ್ರೀ ಸತೀಶ್ SD ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
SDMC ಅಧ್ಯಕ್ಷರಾದ ಶ್ರೀ ವೆಂಕಟೇಶ್ ರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕರಾದ ಶ್ರೀ ತಿಪ್ಪಯ್ಯರವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಗ್ರಾ ಪಂ ಉಪಾಧ್ಯಕ್ಷರು, ಸದಸ್ಯರು, ವಿವಿಧ ಶಾಲೆಗಳ ಶಿಕ್ಷಕರು, ದಾನಿಗಳು ಮತ್ತು ಮಕ್ಕಳು ಭಾಗವಹಿಸಿದ್ದರು.

