ಕರ್ನಾಟಕ : ಚುನಾವಣಾ ಹೊಸ್ತಿಲಲ್ಲಿರುವ ಕರ್ನಾಟಕದಲ್ಲಿ (Karnataka Assembly Election) ಕೇಂದ್ರದ ರಾಜಕೀಯ ಮುಖಂಡರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ನಾಳೆಯಿಂದ ಅಂದರೆ, ಶನಿವಾರ ಮತ್ತು ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಕರ್ನಾಟಕದಲ್ಲಿ ಮತ ಪ್ರಚಾರ ನಡೆಸಲಿದ್ದು, ಬೀದರ್, ಬೆಳಗಾವಿ, ಬೆಂಗಳೂರು, ಕೋಲಾರ, ಮೈಸೂರು, ಹಾಸನ ಸೇರಿದಂತೆ ಹಲವು ಕಡೆಗಳಲ್ಲಿ ರೋಡ್‌ಶೋ, ಸಾರ್ವಜನಿಕ ಸಭೆ, ಮುಖಂಡರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ವೇಳಾಪಟ್ಟಿಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪ್ರಯಾಣದ ವೇಳಾಪಟ್ಟಿ ಪ್ರಕಾರ ಶನಿವಾರ ಬೆಳಿಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.ಬೀದರ್ ವಿಮಾನ ನಿಲ್ದಾಣದಿಂದ ಬೀದರ್ ಜಿಲ್ಲೆಯ ಹುಮ್ನಾಬಾದ್‌ಗೆ ಪ್ರಯಾಣಿಸಲಿದ್ದಾರೆ. ಹುಮ್ನಾಬಾದ್‌ನಲ್ಲಿ ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಸಾರ್ವಜನಿಕ ಸಭೆಯ ಬಳಿಕ ವಿಜಯಪುರಕ್ಕೆ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ. ಅಲ್ಲಿ ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ವಿಜಯಪುರದಿಂದ ಅವರು ಬೆಳಗಾವಿ ಜಿಲ್ಲೆಯ ಕುಡಚಿಗೆ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ. ಅಲ್ಲಿ ಮಧ್ಯಾಹ್ನ 2.45 ಕ್ಕೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಕುಡಚಿಯಿಂದ ಅವರು ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಬೆಂಗಳೂರು ಉತ್ತರದಲ್ಲಿ ರೋಡ್ ಶೋದಲ್ಲಿ ಪಾಲ್ಗೊಳ್ಳಲಿದ್ದಾರೆ.ರಾತ್ರಿ ಬೆಂಗಳೂರಿನಲ್ಲಿ ತಂಗಿ ಭಾನುವಾರ ಬೆಳಗ್ಗೆ ರಾಜಭವನದಿಂದ ಕೋಲಾರಕ್ಕೆ ತೆರಳಲಿದ್ದು, ಅಲ್ಲಿ ಬೆಳಗ್ಗೆ 11.30ಕ್ಕೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಬಳಿಕ ವಿಮಾನದಲ್ಲಿ ಕೋಲಾರದಿಂದ ರಾಮನಗರ ಜಿಲ್ಲೆಯ ಚನ್ನಪಟ್ಟಣಕ್ಕೆ ಪ್ರಧಾನಿ ಪ್ರಯಾಣಿಸಲಿದ್ದಾರೆ. ಅಲ್ಲಿ ಮಧ್ಯಾಹ್ನ 1.30ಕ್ಕೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಅಲ್ಲಿಂದ ಹಾಸನಕ್ಕೆ ಪ್ರಧಾನಿ ಹಾರಲಿದ್ದಾರೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಮಧ್ಯಾಹ್ನ 3.45ಕ್ಕೆ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಅಲ್ಲಿಂದ ಮೈಸೂರಿಗೆ ಪ್ರಯಾಣಿಸಲಿದ್ದಾರೆ. ಅದೇ ದಿನ ಸಂಜೆ ಮೈಸೂರಿನಲ್ಲಿ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ.ಕಾರ್ಯಕ್ರಮದ ನಂತರ ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ದೆಹಲಿಗೆ ತೆರಳಲಿದ್ದಾರೆ.ಮೇ 10 ರಂದು 224 ಸ್ಥಾನಗಳಿಗೆ ಅಸೆಂಬ್ಲಿ ಚುನಾವಣೆ ನಡೆಯಲಿದೆ. ಈ ವರ್ಷದ ಫೆಬ್ರವರಿ ತಿಂಗಳಿನಿಂದ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ನೀಡುತ್ತಿರುವ ಒಂಬತ್ತನೇ ಭೇಟಿ ಇದಾಗಿದೆ.ನಾಳೆ ಮತ್ತು ನಾಡಿದ್ದು ಕರ್ನಾಟಕದ ಭೇಟಿ ಮುಗಿಸಿದ ಬಳಿಕ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದಲ್ಲಿ ಪ್ರಚಾರ ನಡೆಸಲಿದ್ದಾರೆ. ಮೇ 2 ರಂದು ಚಿತ್ರದುರ್ಗ, ವಿಜಯನಗರ, ಸಿಂಧನೂರು, ಕಲಬುರ್ಗಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಮೇ 3 ರಂದು ಮೂಡಬಿದ್ರಿ, ಕಾರವಾರ, ಕಿತ್ತೂರಿನಲ್ಲಿ ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮೇ 6 ರಂದು ಪ್ರಧಾನಿ ಮೋದಿ ಚಿತ್ತಾಪುರ, ನಂಜನಗೂಡು, ತುಮಕೂರು ಗ್ರಾಮಾಂತರ, ಬೆಂಗಳೂರು ದಕ್ಷಿಣದಲ್ಲಿ ಪ್ರಚಾರ ನಡೆಸಲಿದ್ದಾರೆ.