
ಸಕಲೇಶಪುರ : ಪಟ್ಟಣದ ಬಾಳೆಗದ್ದೆಯಲ್ಲಿರುವ ಯುರೋ ಕಿಡ್ಸ್ ಶಾಲೆಯಲ್ಲಿ ಮಾನವ ಹಕ್ಕುಗಳ ರಕ್ಷಣಾ ಸಮಿತಿಯ ಜಿಲ್ಲಾಧ್ಯಕ್ಷ ಜೀವನ್ ಗೌಡ ತಾಲೂಕು ಅಧ್ಯಕ್ಷ ವಿಜಯ್ ಅವರ ನೇತೃತ್ವದಲ್ಲಿ ಶಾಲಾ ಶಿಕ್ಷಕರಿಗೂ ಮತ್ತು ಮಕ್ಕಳಿಗೂ ಕೇಕ್ ಕತ್ತರಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿದರು.
ಈ ಕಾರ್ಯಕ್ರಮದಲ್ಲಿ ಯುರೋ ಕಿಡ್ಸ್ ಶಾಲೆಯ ಶಿಕ್ಷಕರಾದ ನೇಹಾ, ಪ್ರೀತಿ , ಆಥರ್ ಹಾಗೂ ನಗರ ಅಧ್ಯಕ್ಷ ಸಂತೋಷ್, ಪ್ರಧಾನ ಕಾರ್ಯದರ್ಶಿ ಮಂಜು, ಬೈಕೆರೆ ಘಟಕದ ಅಧ್ಯಕ್ಷ ಸುದರ್ಶನ್, ಮಹೇಶ್, ಹಾಗೂ ಇತರ ಕಾರ್ಯಕರ್ತರು ಪಾಲ್ಗೊಂಡಿದ್ದರು.


