
ಸಕಲೇಶಪುರ.2023 ನೇ ಸಾಲಿನಲ್ಲಿ ಬೇಸಿಗೆ ಕಾಲದಲ್ಲಿ ಉಂಟಾದ ಅತಿಯಾದ ತಾಪಮಾನದಿಂದ ಈ ವರ್ಷದ ಮಳೆಗಾಲದ ಸಮಯದಲ್ಲಿ ಕಾಫಿಯಲ್ಲಿ ಕೊಳೆರೋಗ ಸಂಭವಿಸಿದ್ದು ,ಇದರ ಬಗ್ಗೆ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಒದಗಿಸಿ ಕೊಡುವಂತೆಯೂ ಹಾಗೂ ಮಳೆಗಾಲದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿ ಕಾಫಿ, ಕಾಳುಮೆಣಸು ಹಾಗೂ ಅಡಿಕೆ ಬೆಳೆಯ ಮೇಲೆ ಪ್ರತೀಕೂಲ ಪರಿಣಾಮ ಉಂಟಾಗಿರುವುದರಿಂದ ಇದರ ಬಗ್ಗೆ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಒದಗಿಸಿ ಕೊಡುವಂತೆಯೂ ಕಾಫಿ ಮಂಡಳಿ ಸಿ. ಇ. ಒ ರವರನ್ನು ಹಾಗೂ ಹಾಸನ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳನ್ನು ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ನಿಯೋಗವು ಭೇಟಿ ಮಾಡಿ ಮನವಿ ಮಾಡಿದ್ದರ ಮೇರೆಗೆ ಇಂದು ಸಕಲೇಶಪುರ ಉಪ ವಿಭಾಗದ ಮಾನ್ಯ ಉಪ ವಿಭಾಗಾಧಿಕಾರಿಗಳು ,ಕಾಫಿ ಮಂಡಳಿ ಸಕಲೇಶಪುರದ ಎಸ್ ಎಲ್ ಓ ಹಾಗೂ ಕಾಫಿ ಮಂಡಳಿಯ ಕಿರಿಯ ಸಂಪರ್ಕಧಿಕಾರಿಗಳು ಮತ್ತು ಸಿಬ್ಬಂದಿಗಳು ತೋಟಗಳಿಗೆ ಭೇಟಿ ನೀಡಿ ನಷ್ಟದ ಬಗ್ಗೆ ಸಮೀಕ್ಷೆ ನಡೆಸಿರುತ್ತಾರೆ.
ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಅಧ್ಯಕ್ಷರಾದ ಶ್ರೀ ಕೆ.ಎನ್ ಸುಬ್ರಹ್ಮಣ್ಯ ರವರು, ಕಸಬಾ ಹೋಬಳಿ ಬೆಳಗಾರರ ಸಂಘದ ಅಧ್ಯಕ್ಷರಾದ ಶ್ರೀ ಆರ್ ಎಂ ಚಂದ್ರಶೇಖರ್ ರವರು, ಬ್ಯಾಕರವಳ್ಳಿ ಗ್ರಾಮ ಪಂಚಾಯತಿ ಬೆಳಗಾರ ಸಂಘದ ಅಧ್ಯಕ್ಷರಾದ ಶ್ರೀ ಪ್ರಸನ್ನ ರವರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.




