ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಆದೇಶ ಜಾರಿಕಾರರ 11 ಮತ್ತು ಜವಾನ 32 ಹುದ್ದೆಗಳ ಭರ್ತಿ ನಡೆಸಲಾಗುವುದು ಹಾಸನ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆದೇಶ ಜಾರಿಕಾಕರು ಮತ್ತು ಜವಾನ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು 43 ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದ್ದು, ಎಸ್​ಎಸ್​ಎಲ್​ಸಿ ಓದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ಮತ್ತಿತರ ವಿವರ ಇಲ್ಲಿದೆ.ಹುದ್ದೆ ವಿವರ:

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಆದೇಶ ಜಾರಿಕಾರಕ- 11 ಮತ್ತು ಜವಾನ 32 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.ಅಧಿಸೂಚನೆ

ವಿದ್ಯಾರ್ಹತೆ: ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿದ್ದು, ಕನ್ನಡ ಭಾಷೆಯನ್ನು ಬರೆಯಲು ಮತ್ತು ಓದಲು ಬರೆಯಬೇಕು.​ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಹಾಗೂ ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ: ಆದೇಶ ಜಾರಿಕಾರರ ಹುದ್ದೆಗೆ 19,950-37,900, ಜವಾನ ಹುದ್ದೆಗೆ 17,000-28,950 ರೂ. ವೇತನ ನಿಗದಿಸಲಾಗಿದೆ.

ಅರ್ಜಿ ಸಲ್ಲಿಕೆ ವಿವರ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಸಿಲ್ಲ. ಉಳಿದ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ಭರಿಸಬೇಕಿದೆ. ಈ ಅರ್ಜಿ ಶುಲ್ಕವನ್ನು ಆನ್​ಲೈನ್​ ಮೂಲಕ ಪಾವತಿ ಮಾಡಬೇಕಿದೆ.ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್​ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುವುದು.ಈ ಹುದ್ದೆಗಳಿಗೆ ಸೆಪ್ಟೆಂಬರ್​ 4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 3 ಆಗಿದೆ, ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಅಕ್ಟೋಬರ್​ 5 ಆಗಿದೆ.ಈ ಹುದ್ದೆ ಕುರಿತ ಅಧಿಕೃತ ಅಧಿಸೂಚನೆ ಮತ್ತು ಇನ್ನಿತರ ಮಾಹಿತಿ ಪಡೆಯಲು ಅಭ್ಯರ್ಥಿಗಳು hassan.dcourts.gov.in ಗೆ ಭೇಟಿ ನೀಡಬಹುದು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *