ಸಕಲೇಶಪುರ : ತಾಲ್ಲೂಕಿನ ಕುರಭತ್ತೂರು ಗ್ರಾಮ ಪಂಚಾಯಿತಿಯ ಶುಕ್ರವಾರಸಂತೆ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಇಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಛದ್ಮವೇಷ ಕಾರ್ಯಕ್ರಮವನ್ನು ಶಾಲೆಯಲ್ಲಿ ಏರ್ಪಡಿಸಲಾಗಿತ್ತು. ಎಲ್ ಕೆ ಜಿ ಹಾಗೂ ಯುಕೆಜಿ 30 ವಿದ್ಯಾರ್ಥಿಗಳು ಕೃಷ್ಣನ ವೇಷಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮ ಆಚರಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಆಡಳಿತ ವರ್ಗದವರು,ಪೋಷಕ ವರ್ಗದವರು ಭಾಗವಹಿಸುವ ಮೂಲಕ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಶಾಲೆಯಲ್ಲಿ ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *