
ಸಕಲೇಶಪುರ :- ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪಯೋನೀರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ತಮ್ಮ ಗೆಲುವಿನೊಂದಿಗೆ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಲಿದ್ದಾರೆ.
ಇಂದು ನೆಡೆದ ತಾಲ್ಲೂಕು ಮಟ್ಟದ 400 ಮೀ ಪ್ರಥಮ ಸ್ಥಾನ ಹಾಗೂ 100 ಮೀ ದ್ವಿತೀಯ ಸ್ಥಾನ ಪಡೆದ ಶಾಲೆಯ ವಿದ್ಯಾರ್ಥಿಯಾದ ಮಾಸ್ಟರ್ ಮೊಹಮ್ಮದ್ ಸಯೀದ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಹಾಗೂ ಖೋ ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ ಪ್ರತಿನಿದಿಸಲಿದ್ದಾರೆ.
ಈ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕರವರ್ಗ ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದು ,ಜಿಲ್ಲಾಮಟ್ಟದಲ್ಲಿ ಶಾಲೆಯ ಕೀರ್ತಿ ಹರಿಸಲೆಂದು ಹಾರೈಸಿದ್ದಾರೆ.

