ಸಕಲೇಶಪುರ : ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಶ್ರೀ ರಂಗನಾಥ ಪ್ರೌಢಶಾಲೆ ಬಾಳುಪೇಟೆ ವಿದ್ಯಾರ್ಥಿಗಳು ತಮ್ಮ ಗೆಲುವಿನೊಂದಿಗೆ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

ನೆನ್ನೆ ನಡೆದ ಸಕಲೇಶಪುರ ತಾಲ್ಲೂಕು ಮಟ್ಟದ ಬಾಲಕಿಯರ ವಿಭಾಗದ ಗುಂಡು ಎಸೆತ ನಾಫಿಯ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ.

ನಮ್ಮ ಶ್ರೀರಂಗನಾಥ ಪ್ರೌಢಶಾಲೆಯ ವಿದ್ಯಾರ್ಥಿಗಳು ಬಾಲಕರ ವಿಭಾಗದಲ್ಲಿ ವಾಲಿಬಾಲ್ ಚಾಂಪಿಯನ್ನಾಗಿ ಹಾಗೂ ಬಾಲಕಿಯರ ವಿಭಾಗದಲ್ಲಿ ವಾಲಿಬಾಲ್ ಚಾಂಪಿಯನ್ನಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕ ವರ್ಗ ಹಾಗೂ ಪೋಷಕರು ಹಳೆ ವಿದ್ಯಾರ್ಥಿ ಬಳಗ ಮೆಚ್ಚುಗೆ ವ್ಯಕ್ತಪಡಿಸಿದ್ದು, ಜಿಲ್ಲಾಮಟ್ಟದಲ್ಲಿ ಶಾಲೆಯ ಕೀರ್ತಿ ತರಲೆಂದು ಹಾರೈಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *