
ಸಾರ್ವಜನಿಕ ಪ್ರಕಟಣೆಸಕಲೇಶಪುರ ತಾಲೂಕು ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸುವ ಸಭೆಯನ್ನು ದಿನಾಂಕ 13-09-2023 ರಂದು ಬೆಳಗ್ಗೆ 11-30 ರಿಂದ 1-30 ರ ವರೆಗೆ ತಾಲೂಕು ಕಛೇರಿ ಸಭಾಂಗಣದಲ್ಲಿ ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಕಛೇರಿ ವತಿಯಿಂದ ಆಯೋಜಿಸಲಾಗಿದ್ದು ಸಾರ್ವಜನಿಕರಿಂದ ಅಹವಾಲನ್ನು ಸ್ವೀಕರಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಈ ಅವಕಾಶವನ್ನು ತಾಲೂಕಿನ ಜನರು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಾಲೂಕು ಆಡಳಿತದ ವತಿಯಿಂದ ಈ ಮೂಲಕ ತಿಳಿಸಲಾಗಿದೆ.

