
ಸಕಲೇಶಪುರ : ತಾಲೂಕು ಕಾಫರ್ಡ್ ಆಸ್ಪತ್ರೆಗೆ 75ನೇ ವರ್ಷದ ತುಂಬಿದ ಹಿನ್ನಲೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭಾಗಿಯಾಗಿದ್ದರು.
ಇದೆ ವೇಳೆ ಆಸ್ಪತ್ರೆಯಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನೆಡೆಸಿದರು.ಈ ವೇಳೆ ಜಿಲ್ಲಾ ವೈದ್ಯಾಧಿಕಾರಿಯಾದ ಶಿವಸ್ವಾಮಿ ಜಿಲ್ಲಾ ಆಯುಷ್ಯ ವೈದ್ಯಾಧಿಕಾರ ವೀಣಾ ಲತಾ, ತಾಲೂಕು ವೈದ್ಯಾಧಿಕಾರಿ ಮಹೇಶ್ ಸೇರಿದಂತೆ ಆಸ್ಪತ್ರೆಯ ವೈದ್ಯರು,ಪತ್ರಕರ್ತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



