
ಸಕಲೇಶಪುರ :- ಪಟ್ಟಣದ ಹೆಚ್. ಡಿ. ಪಿ. ಎ ಸಭಾಂಗಣ ದಲ್ಲಿ ಇಂದು ಜಿಲ್ಲಾ ಬೆಳೆಗಾರರ ಸಂಘದ ಅಧ್ಯಕ್ಷರಾದ ಕೆ.ಏನ್ ಕ್ಯಾನಹಳ್ಳಿ ಸುಬ್ರಮಣ್ಯರ ಅಧ್ಯಕ್ಷತೆಯಲ್ಲಿ 22ನೇ ವಾರ್ಷಿಕ ಸಭೆ ಹಾಗೂ 9ನೇ ಅಂತರಾಷ್ಟ್ರೀಯ ಕಾಫಿ ದಿನಾಚರಣೆಯ ಪೂರ್ವಭಾವಿ ಸಭೆ ನೆಡೆಸಲಾಯಿತು.
ಸಭೆಯಲ್ಲಿ ತಿಂಗಳ ಖರ್ಚು ವೆಚ್ಚಗಳನ್ನು ಓದುವ ಮೂಲಕ ಸಭೆಯ ಒಪ್ಪಿಗೆ ಪಡೆಯಲಾಯಿತು. ನಂತರ ಸಭೆಯಲ್ಲಿ ಹಿಂದಿನ ತಿಂಗಳು ಅಧ್ಯಕ್ಷರು ಹಾಗೂ ಸಂಘದ ಪದಾಧಿಕಾರಿಗಳು ರೈತರ ಸಮಸ್ಯೆಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು ಹಾಗೂ ಡಿ ಎಫ್ ಓ ಅವರ ಭೇಟಿ ಮಾಡುವ ಮೂಲಕ ರೈತರ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಿಕೊಡುವಂತೆ ಮನವಿ ಮಾಡಿರುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಲಾಯಿತು .
ನಂತರ ಅಕ್ಟೋಬರ್ 01-2023ರಂದು ನೆಡೆಯುವ 9ನೇ ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಆಚರಿಸುತ್ತಿರುವ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬೆಳೆಗಾರರ ಸಂಘದ ಅಧ್ಯಕ್ಷರದ ಕೆ.ಏನ್ ಸುಬ್ರಮಣ್ಯ. ಉಪಾಧ್ಯಕ್ಷರಾದ ಎ ಎಸ್ ಪರಮೇಶ್, ಕಾರ್ಯದರ್ಶಿ ಎಂ ಬಿ ರಾಜೀವ್, ಖಜಾಂಚಿ ಎಂಎಸ್ ಚಂದ್ರಶೇಖರ್, ಜಂಟಿ ಕಾರ್ಯದರ್ಶಿ ಮೀರ್ ಆಲಿ ರಜ್ವೀನ್ ,ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿದರು.



