ತಪ್ಪದೆ ಮತದಾನ ಮಾಡಿ: ನಾರಾಯಣಸ್ವಾಮಿ.ಆಲೂರು: ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಪ್ರತಿಯೊಬ್ಬ ಮತದಾರನ ಹಕ್ಕು ಮತ್ತು ಸಾಮಾಜಿಕ ಹೊಣೆಗಾರಿಕೆ ಎಂದು ತಾ. ಪಂ. ಕಾರ್ಯ ನಿರ್ವಹಣಾಧಿಕಾರಿ ಡಾ. ನಾರಾಯಣಸ್ವಾಮಿ ತಿಳಿಸಿದರು. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಏರ್ಪಡಿಸಲಾಗಿದ್ದ ’ನಮ್ಮ ನಡೆ ಮತದಾನದ ಕಡೆ’ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿ ಮತದಾರನೂ ತನ್ನ ಮತದ ಮೌಲ್ಯವನ್ನು ಅರಿತು ಪ್ರಜಾಪ್ರಭುತ್ವದ ಈ ಪವಿತ್ರ ಹಬ್ಬದಲ್ಲಿ ಪಾಲ್ಗೊಳ್ಳುವ ಮೂಲಕ, ಸದೃಢ ಹಾಗೂ ಬಲಿಷ್ಟ ದೇಶ ಕಟ್ಟುವಂತಾಗಲಿ ಎಂಬುದು ಚುನಾವಣ ಆಯೋಗದ ಆಶಯವಾಗಿದೆ. ಸಾರ್ವಜನಿಕರಲ್ಲಿ ತಮ್ಮ ಮತಗಟ್ಟೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಬ್ಬದ ಮಾದರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ೧೮ ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾನ ಮಾಡಲು ಸಂವಿಧಾನ ಅವಕಾಶ ನೀಡಿದೆ. ಚುನಾವಣೆಯಲ್ಲಿ ಅಮಿಷಗಳಿಗೆ ಬಲಿಯಾಗದೆ ಮುಕ್ತವಾಗಿ ಮತದಾನ ಮಾಡುವ ಮೂಲಕ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದರು. ಜಾಗೃತಿ ಕಾರ್ಯಕ್ರಮದಲ್ಲಿ ಪ. ಪಂ. ಮುಖ್ಯಾಧಿಕಾರಿ ರಾಜೇಶ್, ಕಂದಾಯ ಸಿಬ್ಬಂದಿಗಳಾದ ರಂಜನ್, ನವೀನ್, ರತ್ನಮ್ಮ, ರಾಜಲಕ್ಷಿö್ಮ, ದೀಪಿಕಾ, ಉಷಾರಾಣಿ, ಗಂಗಾದರ್, ಪ. ಪಂ. ಪೌರ ಕಾರ್ಮಿಕರು ಹಾಜರಿದ್ದರು. ಫೋಟೋ ಕ್ಯಾಫ್ಶನ್ಸ್ : ಆಲೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಮ್ಮ ನಡೆ ಮತದಾನದ ಕಡೆ ಮತದಾನ ಜಾಗೃತಿ ಜಾಥಾಕ್ಕೆ ತಾ. ಪಂ. ಕಾರ್ಯ ನಿರ್ವಹಣಾಧಿಕಾರಿ ಡಾ. ನಾರಾಯಣಸ್ವಾಮಿ ಚಾಲನೆ ನೀಡಿದರು. ಮುಖ್ಯಾಧಿಕಾರಿ ರಾಜೇಶ್ ಇತರರು ಹಾಜರಿದ್ದರು.