
ಸಕಲೇಶಪುರ :- ತಾಲ್ಲೂಕಿನ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದ ಶಿಕ್ಷಕಿ ಶೋಭಾ ಎಂ. ಎ. ಅವರಿಗೆ ಶಾಲಾ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುವಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಮಾರಂಭದಲ್ಲಿ ವಿದ್ಯಾರ್ಥಿಗಳು, ಪ್ರಾಂಶುಪಾಲರಾದ ಮಂಜುನಾಥ ಬಿ.ಡಿ., ಉಪ ಪ್ರಾಂಶುಪಾಲರಾದ ಭಾಸ್ಕರ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಸತೀಶ್ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು, ಉಪಸ್ಥಿತರಿದ್ದರು.



