
ಸಕಲೇಶಪುರ : ವಿಕಲಚೇತನರು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲು ಸರ್ಕಾರ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ನೀಡಿದ್ದು ಫಲಾನುಭವಿಗಳು ಇದರ ಸರಿಯಾದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಬುಧುವಾರ 2022-23 ಸಾಲಿನ ಅನಿರ್ಬಂದಿತ್ತ ಅನುದಾನದ ಶೇ 5 ರಷ್ಟು ಮೀಸಲಾಯಿತಿ ವೆಚ್ಚದಡಿಯಲ್ಲಿ 7 ವಿಕಲಚೇತನರಿಗೆ ವಿದ್ಯುತ್ ಚಾಲಿತ ದ್ವಿಚಕ್ರವಾಹನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿಕಲಚೇತನರು ಮುಖ್ಯವಾಹಿನಿಗೆ ಬರಲು ಸರ್ಕಾರ ವಿವಿಧ ಯೋಜನೆ ರೂಪಿಸಿ ಪ್ರತ್ಯೇಕ ಅನುದಾನ ಮೀಸಲಿಡುತ್ತಿದೆ. ವಿಕಲಚೇತನರು ನ್ಯೂನತೆಯ ಬಗ್ಗೆ ಮಾನಸಿಕವಾಗಿ ಕುಗ್ಗದೇ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು.ಅಂಗವಿಕಲರು ಸಾಮಾನ್ಯರಂತೆ ಜೀವನ ನಡೆಸಲು ಕಷ್ಟಕರವಾಗುತ್ತಿದೆಯಾದರೂ ಅವರಿಗೆ ಸ್ವಲ್ಪ ಅನುಕೂಲವಾಗಲು ತಮ್ಮ ಕೆಲಸಗಳನ್ನು ನಿರ್ವಹಿಸಲು ಇಂತಹ ದ್ವಿಚಕ್ರ ವಾಹನಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಂಗವಿಕಲರ ಕಲ್ಯಾಣಕ್ಕಾಗಿ ನಾವು ಸದಾ ಬದ್ಧರಿದ್ದೇವೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ದ್ವಿಚಕ್ರ ವಾಹನ ಪಡೆದ ಮಾಸುವಳ್ಳಿ ಗ್ರಾಮದ ಯಶೋದರ ಮಾತನಾಡಿ, ಅಂಗವಿಕಲರು ಸಮಾಜದಲ್ಲಿ ಸ್ವಂತ ಬದುಕು ಕಟ್ಟಿಕೊಳ್ಳಲು ಬೈಕ್ ವಿತರಣೆ ಮಾಡಿರುವುದು ಸಂತಸದ ವಿಷಯ. ಜೊತೆಗೆ ಇಂದಿನ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು ನಮಗೆ ಬ್ಯಾಟರಿ ಚಾಲಿತ ವಾಹನ ನೀಡಿರುವುದು ಅನುಕೂಲವಾಗಲಿದೆ.ನಮ್ಮ ಸಂಘಟನೆಯ ವತಿಯಿಂದ ಶಾಸಕಸಿಮೆಂಟ್ ಮಂಜು ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ.
ಈ ಸಂಧರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಣಾಧಿಕಾರಿ ರಾಮಕೃಷ್ಣ, ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರಾದ ಆದಿತ್ಯ, ಹರೀಶ್ ಸೇರಿದಂತೆ ಮುಂತಾದವರು ಇದ್ದರು.



