
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೋಕರ್‌ನಾಗ್‌ನ ದಟ್ಟ ಅರಣ್ಯದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ನಿನ್ನೆ ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಮಂಗಳವಾರ ತಡರಾತ್ರಿ ಉಗ್ರರ ಬೇಟೆಗೆ ಸೇನೆ ಮತ್ತು ಪೊಲೀಸರು ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.ಬುಧವಾರ ಮುಂಜಾನೆ ಎನ್‌ಕೌಂಟರ್ ನಡೆದಿದೆ.
ಚಿನಾರ್ ಕಾರ್ಪ್ಸ್‌ನ ಜನರಲ್-ಆಫೀಸರ್-ಕಮಾಂಡಿಂಗ್ (ಜಿಒಸಿ), ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮತ್ತು ವಿಕ್ಟರ್ ಫೋರ್ಸ್‌ನ ಜಿಒಸಿ, ಮೇಜರ್ ಜನರಲ್ ಬಲ್ಬೀರ್ ಸಿಂಗ್ ಅವರು ಕಾರ್ಯಾಚರಣೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಮತ್ತು ಭಯೋತ್ಪಾದಕರನ್ನು ಬಿಡಲಾಗುವುದಿಲ್ಲ ಎಂದು ಹೇಳಿದರು.
ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಭಯೋತ್ಪಾದಕರನ್ನು ಹೊಡೆದುರುಳಿಸಲು ಹೊಸ ತಲೆಮಾರಿನ ಶಸ್ತ್ರಾಸ್ತ್ರಗಳು ಮತ್ತು ಸಾಧನಗಳನ್ನು ಬಳಸಲಾಗುತ್ತಿದೆ. 40 ಗಂಟೆಗಳ ಕಾಲ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಪಡೆಗಳು ಸ್ಟ್ರೈಕ್ ಸಾಮರ್ಥ್ಯದ ಹೆರಾನ್ ಡ್ರೋನ್‌ಗಳನ್ನು ಬಳಸುತ್ತಿವೆ.
