
ಬೇಲೂರು : ಬರ ಪೀಡಿತ ತಾಲ್ಲೂಕುಗಳನ್ನು ಘೋಷಣೆ ಮಾಡಿದ ರಾಜ್ಯ ಸರ್ಕಾರ , ಬೇಲೂರು ತಾಲ್ಲೂಕು ಮಲೆನಾಡು ಮತ್ತು ಅರೆಮಲೆನಾಡು ಹಾಗೂ ಬಯಲು ಸೀಮೆ ಪ್ರದೇಶ ಹೊಂದಿದ್ದು, ತೀವ್ರ ಮಳೆ ಅಭಾವ ಕಂಡುಬಂದಿದೆ ಜೋಳ, ರಾಗಿ, ಭತ್ತ ಕಾಫಿ, ಶುಂಠಿ, ಕಾಳುಮೆಣಸು ಬೆಳೆಗಳು ಸಂಪೂರ್ಣ ಮಳೆ ಇಲ್ಲದೆ ನೆಲಕಚ್ಚಿದೆ ,ಹೀಗಿರುವಾಗ ಸಾಧಾರಣ ಬರ ಪೀಡಿತ ತಾಲ್ಲೂಕು ಬೇಲೂರು ಎಂದು ಘೋಷಿಸಿರುವುದು ಅತ್ಯಂತ ಖಂಡನೀಯ .
ನಮ್ಮ ಪಕ್ಕದ ಮಡಿಕೇರಿ ಜಿಲ್ಲೆಯ ಎರಡು ತಾಲೂಕುಗಳನ್ನು ತೀವ್ರ ಬರ ಪೀಡಿತ ತಾಲ್ಲೂಕು ಎಂದು ಘೋಷಿಸಿರುವುದು ಸಂತೋಷದ ವಿಷಯ ಆದರೆ ನಮ್ಮ ತಾಲೂಕನ್ನು ಸಾಧಾರಣ ಬರ ಪೀಡಿತ ತಾಲ್ಲೂಕು ಘೋಷಿಸಿದ್ದಾರೆ, ಕೂಡಲೇ ಅಧಿಕಾರಿಗಳು ಮರುಪರಿಶೀಲನೆ ಮಾಡಿ ಬೇಲೂರು ತಾಲೂಕನ್ನು ತೀವ್ರ ಬರ ಪೀಡಿತ ಪ್ರದೇಶ ವ್ಯಾಪ್ತಿ ಗೆ ಸೇರಿಸಬೇಕೆಂದು ಒತ್ತಾಯಿಸುತ್ತೇವೆ.
ಇದರ ಬಗ್ಗೆ ಸ್ಥಳೀಯ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಗಮನಹರಿಸಬೇಕೆಂದು ಒತ್ತಾಯಿಸುತ್ತೇವೆ.
ಅದ್ದೂರಿ ಕುಮಾರ್ ಬೇಲೂರು ತಾಲೂಕು ಕಾಫಿ ಬೆಳೆಗಾರರ ಸಂಘ ಅಧ್ಯಕ್ಷರು.

