
ಹೆತ್ತೂರು : ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಭಾರತದ ಸಂವಿಧಾನದ ಪೀಠಿಕೆಯನ್ನು ಓದುವುದರ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯ ಆಶಯಗಳ ಕುರಿತು ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಸಿದ್ದೇಶ್ ವಿಶೇಷ ಉಪನ್ಯಾಸ ನೀಡಿದರು.
ಕನ್ನಡ ಉಪನ್ಯಾಸಕಿ ಮಂಜುಳಾ ಬಿ.ಈ. ಸಂವಿಧಾನದ ಪ್ರಸ್ತಾವನೆಯನ್ನು ವಾಚಿಸಿದರು. ಪ್ರಾಂಶುಪಾಲ ಮಂಜುನಾಥ ಬಿ.ಡಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಎಲ್ಲಾ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





