
ಸಕಲೇಶಪುರ : ಪಟ್ಟಣದಲ್ಲಿ ಇಂದು ಪಕ್ಷದ ಕಛೇರಿಯಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ನೇತೃತ್ವದಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಮುರುಳಿ ಮೋಹನ್ ಪ್ರಜೆಗಳನ್ನೇ ಪ್ರಭುವಾಗಿಸಿದ ಯಾವುದೇ ತಾರತಮ್ಯವಿಲ್ಲದೆ ಎಲ್ಲರನ್ನೂ ಸಮಾನತೆಯಿಂದ ಕಾಣುವ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುಮ ನಿಟ್ಟಿನಲ್ಲಿ ಸಂವಿಧಾನಕ್ಕೆ ಮತ್ತಷ್ಟು ಶಕ್ತಿ ತುಮಬೋಣ ಎಂದರು.
ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಸಕಲೇಶಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದಂತಹ ಬೈರಮುಡಿ ಚಂದ್ರು ರವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಪ್ರಜಾಪ್ರಭುತ್ವ ದಿನದ ಮಹತ್ವವನ್ನು ತಿಳಿಸಿ ಹಾಗೂ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮವನ್ನು ನಡೆಯಿತು.
ನಂತರ ಸ್ವತಃ ಮುರಳಿ ಮೋಹನ್ ರವರೇ ಸಂವಿಧಾನ ಪೀಠಿಕೆಯನ್ನು ಮುಖಂಡರುಗಳಿಗೆ ಓದಿ ಹೇಳಿ ಕೊಟ್ಟಿದ್ದು ವಿಶೇಷವಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಸಕಲೇಶಪುರ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಕಾಂಗ್ರೆಸ್ ಮುಖಂಡರುಗಳು ಜೊತೆಗೂಡಿ ಮಾಲಾರ್ಪಣೆ ಮಾಡಲಾಯಿತು.


