ಹಾಸನ: ಪರಿಶಿಷ್ಟ ಜಾತಿಯ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಬೇಕು ಎಂದು ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಹೇಳಿದರು.

ಹಾಸನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023 24ನೇ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿವಿಧ ಇಲಾಖೆಗಳು ಆಗಸ್ಟ್ 2023 ಅಂತ್ಯಕ್ಕೆ ಸಾಧಿಸಿರುವ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯೋಜನೆಗಳು ನೈಜ ಫಲಾನುಭವಿಗಳಿಗೆ ದೊರಕಬೇಕು.

ಬಹುತೇಕ ಎಲ್ಲಾ ಇಲಾಖೆಗಳಲ್ಲೂ ಪರಿಶಿಷ್ಟ ಜಾತಿ ಹಾಗೂ ಪರಿಚಿತ ಪಂಗಡಕ್ಕೆ ಕೆಲವೊಂದು ಅನುದಾನಗಳು ಮೀಸಲಿದೆ. ಈ ಅನುದಾನಗಳನ್ನು ಸರಿಯಾಗಿ ಮೀಸಲಿಡಲು ಅಧಿಕಾರಿಗಳು ಮುಂದಾಗಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನ ಹೆಚ್ಚಿರುವ ತಾಲೂಕುಗಳಿಗೆ ಹೆಚ್ಚಿನ ಅನುದಾನ ನೀಡಬೇಕು.

ಇದೇ ಸಂದರ್ಭದಲ್ಲಿ ಆಲೂರು ತಾಲೂಕು ಹಾಗೂ ಕಟ್ಟಾಯ ಹೋಬಳಿಯನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಹೊರ ಇಟ್ಟಿರುವುದು ಸರಿಯಲ್ಲ, ಕೂಡಲೇ ಬರ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಸೇರಿಸಲು ಕ್ರಮ ಕೈ ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮಾ ರವರಿಗೆ ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ, ಕೃಷ್ಣ ಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಲಕ್ಷ್ಮೇ ಗೌಡ, ಕೃಷಿ ಇಲಾಖೆ ಉಪ ನಿರ್ದೇಶಕರಾದ ಭಾನುಪ್ರಕಾಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಮಂಗಳ, ಪಾಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಡಾ. ರಮೇಶ್ ಮತ್ತಿತರರು ಸಭೆ ಯಲ್ಲಿ ಹಾಜರಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *