ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್‌ನ್ನು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಮಂಡನೆಯನ್ನು ಮಾಡಿದ್ದಾರೆ.

ಸಂಸತ್ತಿನ ನೂತನ ಕಟ್ಟಡದಲ್ಲಿ ನಡೆಯುತ್ತಿರುವ ಮೊದಲ ದಿನದ ವಿಶೇಷ ಅಧಿವೇಶನದಲ್ಲಿ ಬಿಲ್‌ ಮಂಡನೆ ನಡೆದಿದೆ. ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಮಂಡನೆ ಮಾಡಲಾಗಿದೆ.

ಈ ಕುರಿತು ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ನಾರಿ ಶಕ್ತಿ ವಂದನ ಅಧಿನಿಯಮ’ ಮಸೂದೆಯು ಹೆಚ್ಚಿನ ಮಹಿಳೆಯರು ಸಂಸತ್ತು ಮತ್ತು ವಿಧಾನಸಭೆಗಳ ಸದಸ್ಯರಾಗುವುದಕ್ಕೆ ಹೆಚ್ಚಿನ ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.ಮಸೂದೆಯು ಲೋಕಸಭೆ ಮತ್ತು ಅಸೆಂಬ್ಲಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ನೀಡುತ್ತದೆ, ಆದರೆ ರಾಜ್ಯಸಭೆ ಅಥವಾ ವಿಧಾನ ಪರಿಷತ್ತುಗಳಲ್ಲಿ ಈ ಮೀಸಲಾತಿ ಇರುವುದಿಲ್ಲ.ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳಿಗೆ ಮೀಸಲಾದ ಮೂರನೇ ಒಂದು ಭಾಗದಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿರುತ್ತವೆ ಸೇರಿ ಹಲವು ಅಂಶಗಳನ್ನು ಬಿಲ್‌ ಹೊಂದಿದೆ.

ರಾಜ್ಯ ಮತ್ತು ರಾಷ್ಟ್ರಮಟ್ಟದ ರಾಜಕೀಯದಲ್ಲಿ ಮಹಿಳೆಯರು ಹೆಚ್ಚಿನ ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುವ ಉದ್ದೇಶವನ್ನು ಈ ಮಸೂದೆ ಹೊಂದಿದೆ ಎಂದು ಸರ್ಕಾರ ಹೇಳಿದೆ. ಪ್ರಸ್ತಾವಿತ ಮಸೂದೆಯು ಸುಮಾರು 27 ವರ್ಷಗಳಿಂದ ಬಾಕಿ ಉಳಿದಿತ್ತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *