ಸಕಲೇಶಪುರ : ಜನಸಾಮಾನ್ಯರಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಕಾಲ ಹರಣ ಮಾಡದೆ ವೇಗವಾಗಿ ಕೆಲಸ ಮಾಡಿಕೊಡಬೇಕೆಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಪಟ್ಟಣದ ಮಿನಿವಿಧಾನ ಸೌಧದಲ್ಲಿ ನೆಡೆದ ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪಿಂಚಣಿ ಪ್ರಮಾಣ ಪತ್ರಗಳನ್ನು ವಿತರಿಸಿ ಮಾತನಾಡಿ ಪಿಂಚಣಿ ಅದಾಲತ್ ಒಂದು ಉತ್ತಮವಾದ ಯೋಜನೆ ಯಾಗಿದೆ. ಸರ್ಕಾರ ವೃದ್ಧಾಪ್ಯ ವೇತನ ವಿಧವಾ ವೇತನ ಸೇರಿದಂತೆ ಇನ್ನು ಹಲವು ವೇತನಗಳನ್ನು ನೀಡುತ್ತಿದೆ. ಈ ವೇತನಗಳ ಹಣ ಕಡಿಮೆಯಾಗಿದ್ದರೂ ಸಹ ಇದೆ ಹಣವನ್ನ ಹಲವು ಕುಟುಂಬಗಳು ಜೀವನೋಪಾಯಕ್ಕಾಗಿ ನಂಬಿದೆ.

ಈ ನಿಟ್ಟಿನಲ್ಲಿ ಹಿರಿಯ ನಾಗರಿಕರಿಗೆ ವೇಗವಾಗಿ ಅಧಿಕಾರಿಗಳು ಕೆಲಸ ಮಾಡಿಕೊಡಬೇಕೆಂದು ಹೇಳಿದರು.

ತಹಸೀಲ್ದಾರ್ ಮೇಘನಾ ಮಾತನಾಡಿ ಕಂದಾಯ ಇಲಾಖೆಯ ಮಹತ್ವಕಾಂಕ್ಷಿ ಯೋಜನೆ ಇದಾಗಿದೆ.ಕೆಲವರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡದ ಕಾರಣ ಪಿಂಚಣಿಗಳು ಬರುವುದು ರದ್ದಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಲು ಮುಂಧಾಗಬೇಕು ಎಂದರು.

ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ ಮೋಹನ್,ಶಿರಸ್ತೆದಾರ್ ಉಮೇಶ್, ಸೇರಿದಂತೆ ಇತರರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *