ಸಕಲೇಶಪುರ : ಸುತ್ತೂರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 108 ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ಶನಿವಾರ ಶ್ರೀ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಜರುಗಿತು.

ಕಾರ್ಯಕ್ರಮ ಉದ್ಘಾಟನೆಯನ್ನು ಸಕಲೇಶಪುರ ಆಲೂರು ಕಟ್ಟಾಯ ವಿಧಾನ ಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜುನಾಥ್ ನೆರವೇರಿಸಿದರು.

ನುಡಿನಮನದ ನುಡಿಗಳನ್ನು ಅರಕಲಗೂಡು ದೊಡ್ಡಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಗಳು ಹೇಳಿದರು.ಉಪವಿಭಾಗಾಧಿಕಾರಿ ಡಾ.ಶೃತಿ. ಕೆ.ಎಂ. ಮಾತನಾಡಿದರು

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಚ್.ಎಂ ವಿಶ್ವನಾಥ್,ಮಲೆನಾಡುವೀರಶೈವ ಸಮಾಜದ ಅಧ್ಯಕ್ಷ ದಿವಾನ್ ದೇವರಾಜು, ಕಾರ್ಯದರ್ಶಿ ಮೂಗಲಿ ಧರ್ಮರಾಜ್,ಮುಖಂಡರಾದ ಶಿವಪ್ರಸಾದ್,ವಿದ್ಯಾಶಂಕರ್,ಕಾಂಗ್ರೆಸ್ ಮುಖಂಡರಾದ ಮುರುಳಿಮೋಹನ್,ಎಚ್.ಎಚ್ ಉದಯ್ ಜೆಎಸ್‌ಎಸ್ ಸಂಸ್ಥೆಯ ಸಂಯೋಜನಾಧಿಕಾರಿ ಮಂಜುನಾಥ್ ಮುಂತಾದವರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಶ್ರೀ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಗುರುವೇಗೌಡ ಕಲ್ಯಾಣ ಮಂಟಪದವರೆಗೆ ಸ್ವಾಮೀಜಿಯವರ ಭಾವಚಿತ್ರದೊಂದಿಗೆ ಮೆರವಣಿಗೆಯಲ್ಲಿ ಬರಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *