
ಸಕಲೇಶಪುರ :- ಸಮಾಜ ಸೇವೆ ಮೂಲಕ ಹೆಸರು ಮಾಡಿದ್ದ ಬಾಚಿಹಳ್ಳಿ ಪ್ರತಾಪ್ ಗೌಡ ಕಾಂಗ್ರೆಸ್ ಪಕ್ಷಕ್ಕೆ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಸೇರ್ಪಡೆಗೊಂಡರು.
ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಒಪ್ಪಿ ಬಾಚಹಳ್ಳಿ ಪ್ರತಾಪ್ ಗೌಡ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮುರುಳಿ ಮೋಹನ್ ಹಾಗೂ ಸಕಲೇಶಪುರ ಬ್ಲಾಕ್ ಅಧ್ಯಕ್ಷರಾದ ಭೈರಮುಡಿ ಚಂದ್ರು ಅವರ ಮಾರ್ಗದರ್ಶನದಲ್ಲಿ ಇಂದು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮುರುಳಿ ಮೋಹನ್ ಅವರು ” ಪ್ರತಾಪ್ ಗೌಡ್ರು ಹೆತ್ತೂರು ಹಾಗೂ ಯಸಳೂರು ಹೋಬಳಿಯ ಭಾಗದಲ್ಲಿ ನಿಸ್ವಾರ್ಥ ಸೇವೆಯಿಂದ ತನ್ನದೇ ಆದಂತಹ ಸ್ನೇಹಿತರು ಹಾಗೂ ಅಭಿಮಾನಿ ಬಳಗವನ್ನು ಹೊಂದಿರುವ ಇವರು ಚುನಾವಣೆಯ ಪೂರ್ವದಿಂದಲೂ ನನ್ನ ಹಾಗೂ ನಾಯಕರದ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಅವರ ಸಂಪರ್ಕದಲ್ಲಿದ್ದರು. ಇಂದು ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿರುವುದು ತುಂಬಾ ಖುಷಿಯ ವಿಚಾರ. ಮುಂದಿನ ದಿನಗಳಲ್ಲಿ ಪಕ್ಷ ಕಟ್ಟುವಲ್ಲಿ ಅವರ ಸೇವೆ ಸದಾ ಇರುತ್ತದೆ. ಇದರಿಂದ ನಮ್ಮ ಪಕ್ಷಕ್ಕೆ ಇನ್ನಷ್ಟು ಬಲಬಂದಂತಾಗಿದೆ. ” ಎಂದು ಮೆಚ್ಚುಗೆಯ ಮಾತನಾಡಿದರು.
ಹೇಳಿಕೆ…” ಕಾಂಗ್ರೆಸ್ ಪಕ್ಷದ ಉತ್ತಮ ಕೆಲಸ,ಕಾರ್ಯಗಳು ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಕ್ಕೆ ಸ್ಪೂರ್ತಿ ನೀಡಿದೆ. ಸಕಲೇಶಪುರದ ಪರಾಜಿತ ಅಭ್ಯರ್ಥಿ ಮುರುಳಿ ಮೋಹನ್ ಅವರು ಕೂಡ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಪರಜಿತರಾದರು ಕೂಡ ಕ್ಷೇತ್ರದ ಜನರ ಹಾಗೂ ಪಕ್ಷದ ಮುಖಂಡರ ಜೊತೆ ನಿಕಟ ಸಂಪರ್ಕವನ್ನ ಇಟ್ಟುಕೊಳ್ಳುವ ಮೂಲಕ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನಾನು ಕೂಡ ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡುವುದರ ಜೊತೆಗೆ ಪಕ್ಷ ಕಟ್ಟುವಲ್ಲಿ ಶ್ರಮ ವಹಿಸುತ್ತೇನೆ ” ಬಾಚಿಹಳ್ಳಿ ಪ್ರತಾಪ್ ಗೌಡ ಸಮಾಜ ಸೇವಕರು.



