
ಹೆತ್ತೂರು : ಕರ್ನಾಟಕ ಪಬ್ಲಿಕ್ ಶಾಲೆ ಹೆತ್ತೂರಿನ ಪೂರ್ವ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಹೆತ್ತೂರಿನ ಸತ್ಯ ಮಲ್ಲೇಶ್ವರ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಶ್ರೀ ಸಚಿನ್ ಹೆಚ್.ಎಂ, ಪ್ರಾಂಶುಪಾಲರಾದ ಮಂಜುನಾಥ ಬಿ.ಡಿ, ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಹೆಚ್.ಕೆ, ಅರ್ಚಕರಾದ ಶ್ರೀ ಸತ್ಯಮೂರ್ತಿ ಭಟ್ ನರ್ಸರಿ ವಿಭಾಗದ ಶಿಕ್ಷಕರು, ಉಪನ್ಯಾಸಕರು ಮತ್ತು ಕಾಲೇಜು ವಿಭಾಗದ ರೇಂಜರ್ಸ್ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

