
ಹಾಸನದ ಸಹಕಾರ ಭವನದ ಸಭಾಂಗಣದಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಬೇಲೂರು ತಾಲೂಕಿನ ಅರೇಹಳ್ಳಿಯ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ವಿಜಯಲಕ್ಷ್ಮಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿನಿಯನ್ನು ಪ್ರಾಂಶುಪಾಲರಾದ ಪರಮಶಿವಪ್ಪ, ಸೋಮನಾಥ್, ವಿಜಯ್ ಕುಮಾರ್ ಹಾಗೂ ಇತರ ಉಪನ್ಯಾಸಕರು ಅಭಿನಂದಿಸಿದ್ದಾರೆ.
