ಸಕಲೇಶಪುರ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಶುಕ್ರವಾರ ಕನ್ನಡ ಪರ ಹಾಗೂ ರೈತಪರ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆಯನ್ನು ಹಾಸನ ಜಿಲ್ಲಾಧಿಕಾರಿಗಳು ಘೋಷಣೆ ಮಾಡಿರುತ್ತಾರೆ.
ಮಾನ್ಯ ಉಪನಿರ್ದೇಶಕರ ನಿರ್ದೇಶನದಂತೆ ,ಸಂಘ ಸಂಸ್ಥೆಗಳ ಒತ್ತಾಯದ ಮೇರೆಗೆ, ದಿನಾಂಕ 29/9/2023 ರಂದು ಕರ್ನಾಟಕ ಬಂದ್ ಪ್ರಯುಕ್ತ ಸಕಲೇಶಪುರ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ,ಅನುದಾನ ರಹಿತ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆಯನ್ನು ನೀಡಲಾಗಿದೆ. ಈ ದಿನದ ಕಾರ್ಯಭಾರವನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವಂತೆ ಆದೇಶಿಸಿದೆ ಬಿ ಇ ಓ ಸಕಲೇಶಪುರ