
ಸಕಲೇಶಪುರ :-ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆಕೊಟ್ಟ ಹಿನ್ನಲೆಯಲ್ಲಿ ಇಂದು ಸಕಲೇಶಪುರದ ಅಂಗಡಿ ವರ್ತಕರು ಹಾಗೂ ಆಟೋ ಚಾಲಕರು ಮತ್ತು ಟ್ಯಾಕ್ಸಿ ಚಾಲಕರು ಹಾಗೂ ಕನ್ನಡ ಪರ ಜನ ಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದರಿಂದ ಸಕಲೇಶಪುರ ಸಂಪೂರ್ಣ ಬಂದ್ ಆಗಿರುವ ದೃಶ್ಯ ಕಂಡು ಬಂತು .ಇನ್ನೂ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು.




