
ಸಕಲೇಶಪುರ : ಹಲವಾರು ವರ್ಷಗಳಿಂದ ಜೆಡಿಎಸ್ ಪಕ್ಷದಲ್ಲಿ ಇದ್ದ ಕಾರ್ಯಕರ್ತರು ಇಂದು ಕಾಂಗ್ರೆಸ್ ಪಕ್ಷದ ಮುಖಂಡ ಮುರುಳಿ ಮೋಹನ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಂತ ಕಲ್ಗಣೆ ಮಂಜಯ್ಯ ಮತ್ತು ಹೆನ್ಲಿ ಗಂಗಾಧರ್ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಮುರುಳಿ ಮೋಹನ್ ಅವರ ನಿವಾಸದಲ್ಲಿ ಕೆಲ ನಾಯಕರುಗಳ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡರು.
