ಬೇಲೂರು :-ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ನಾರ್ವೆ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಮಾಡಲಾಯಿತು.

ಕಾರ್ಯಕ್ರಮದ ಉದ್ದೇಶಿಸಿ ಮಾತನಾಡಿದ ನಾರ್ವೆಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲಾಶ್ರೀ ಸೋಮಯ್ಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಹಿಂಸೆ ಮೂಲಕ ಸ್ವಾತಂತ್ರ್ಯ ತಂದು ಕೊಟ್ಟಂತಹ ಮಹಾತ್ಮ ಗಾಂಧೀಜಿಯವರ ಕೊಡುಗೆ ಅಪಾರವಾದದ್ದು , ಹಾಗೆಯೇ ಭಾರತದ ಎರಡನೇ ಪ್ರಧಾನಮಂತ್ರಿಯಾಗಿ ಲಾಲ್ ಬಹದ್ದೂರ್ ಶಾಸ್ತ್ರಿಯವರು ಉಕ್ಕಿನ ಮನುಷ್ಯ ಎಂಬ ಬಿರುದಿಗೆ ಪಾತ್ರರಾದವರು ಅವರ ಆದರ್ಶ ಗಳನ್ನು ಪಾಲಿಸಿಕೊಂಡು ಹೋಗಬೇಕು ಎಂದರು.

ಈ ಸಂದರ್ಭದಲ್ಲಿಉಪಾಧ್ಯಕ್ಷ ಮಲ್ಲಿಕಾರ್ಜುನ್ ಸುಲಗಳಲೆ, ಸದಸ್ಯರಾದ ಮಲ್ಲಿಕಾರ್ಜುನ ನಾರ್ವೆ, ಬೇಬಿ ಪ್ರಕಾಶ್, ಮಂಜುನಾಥ್, ಕಾರ್ಯದರ್ಶಿ ಚಾಮರಾಜ್ , ಎಸ್.ಡಿ.ಎ.ಎ. ಸುನೀತಾ, ನಾರಾಯಣ, ರಾಜು ಹಾಗೂ ಸಿಬ್ಬಂದಿಗಳು ಹಾಜರಿದ್ದರು .

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *