ಸಕಲೇಶಪುರ :-ತಾಲ್ಲೂಕಿನ ಹೆತ್ತೂರು ಹೋಬಳಿಯ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ 154ನೇ ಗಾಂಧಿ ಜನ್ಮದಿನಾಚರಣೆ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಪ್ರಾಂಶುಪಾಲರಾದ ಮಂಜುನಾಥ ಬಿ.ಡಿ. ಗಾಂಧಿಜೀಯವರ ಜೀವನ, ಸಂದೇಶಗಳು ಮತ್ತು ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ನಾಯಕತ್ವದ ಕುರಿತು ಮಾತನಾಡಿದರು. ಅಲ್ಲದೇ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ ಮತ್ತು ಪ್ರಸ್ತುತ ಅದರ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮುಖ್ಯ ಶಿಕ್ಷಕ ಸತೀಶ್ ಹೆಚ್.ಕೆ. ಸ್ವಾಗತಿಸಿ ನಿರೂಪಿಸಿದರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಉಪ ಪ್ರಾಂಶುಪಾಲರಾದ ಭಾಸ್ಕರ್, ಉಪನ್ಯಾಸಕರು, ಶಿಕ್ಷಕ ಮತ್ತು ಶಿಕ್ಷಕೇತರ ವರ್ಗ ಮೊದಲಾದವರು ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಚಿನ್ ಹೆಚ್.ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಳಿಕ ವಿದ್ಯಾರ್ಥಿಗಳು ಶ್ರಮದಾನ ನಡೆಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *