
ಅನಾರೋಗ್ಯದಿಂದಾಗಿ ರಾಷ್ಟ್ರಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಅವರು ಇನ್ನಿಲ್ಲ, ಸಾವನ್ನಪ್ಪಿದ್ದಾರೆ ಅಂತ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ವೈರಲ್ ಆಗಿತ್ತು. ಆ ಬಗ್ಗೆ ದತ್ತು ಪುತ್ರ ಏನ್ ಹೇಳಿದ್ರು ಅಂತ ಮುಂದೆ ಓದಿ.
ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಉಮೇಶ್ ಅವರು, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಸಾಲು ಮರದ ತಿಮ್ಮಕ್ಕ ಆರೋಗ್ಯ ಸ್ಥಿರವಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಅವರು ಇನ್ನಿಲ್ಲ, ನಿಧನ ಅನ್ನೋ ಸುದ್ದಿ ಸುಳ್ಳು. ಇಂತಹ ಸುದ್ದಿಗಳನ್ನು ಹರಡಬೇಡಿ. ಅವರು ಬೇಗ ಗುಣಮುಖರಾಗುವಂತೆ ಬೇಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.ಅಂದಹಾಗೇ ಕೆಲ ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಸಾಲುಮರದ ತಿಮ್ಮಕ್ಕ ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.ಬೆಂಗಳೂರಿನಿಂದ ತೆರಳಿ ಹಾಸನ ಜಿಲ್ಲೆಯ ಬೇಲೂರಿನಲ್ಲಿ ತಿಮ್ಮಕ್ಕ ವಾಸವಿದ್ದರು. ಬೇಲೂರು ಮಲೆನಾಡು ಪ್ರದೇಶ ಆಗಿರುವುದರಿಂದ ಶೀತ ಜಾಸ್ತಿಯಾಗಿದೆ. ಕಳೆದ ಮೂರು ದಿನಗಳಿಂದ ಸ್ವಲ್ಪ ಉಸಿರಾಟದ ಸಮಸ್ಯೆಯಾಗಿತ್ತು. ಬೇಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕವೂ ಕಡಿಮೆ ಆಗಿರಲಿಲ್ಲ. ಹೀಗಾಗಿ ಬೆಂಗಳೂರಿಗೆ ಆಗಮಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
