ಸಕಲೇಶಪುರ :- ಹೆತ್ತೂರು ಹೋಬಳಿ ವಳಲಹಳ್ಳಿ ಗ್ರಾಮಪಂಚಾಯಿತಿಯಲ್ಲಿ ನಾಳೆ ದಿನಾಂಕ 06/10/2023 ರಂದು ಶುಕ್ರವಾರ ಬೆಳಗ್ಗೆ 10 ರಿಂದ 11 ಗಂಟೆವರೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ವತಿಯಿಂದ ವಲಳಹಳ್ಳಿ ಕೂಡಿಗೆ ಬೆಳೆಗಾರರ ಸಂಘದಲ್ಲಿ ಸಾವಯವ ಕೃಷಿ ಕುರಿತು ಮಾಹಿತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,ಸಾವಯವ ಕೃಷಿಗೆ ಸಂಬಂಧ ಪಟ್ಟ ಮಾಹಿತಿ ಹಾಗೂ ಮಾರ್ಗದರ್ಶನವನ್ನು ನೀಡಲು ಕೃಷಿ ಅಧಿಕಾರಿಗಳು ಆಗಮಿಸಲಿದ್ದಾರೆ.

ಎಲ್ಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಇದರ ಸದುಪಯೋಗಪಡಿಸಿಕೊಂಡು ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನ ವತಿಯಿಂದ ಈ ಮೂಲಕ ಕೇಳಿಕೊಂಡರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *