ಸಕಲೇಶಪುರ :- ಮಾನವ ಹಕ್ಕುಗಳ ರಕ್ಷಣಾ ಸಮಿತಿ ವತಿಯಿಂದ ಸಕಲೇಶಪುರ ಪಟ್ಟಣದ ಹೃದಯ ಭಾಗದಲ್ಲಿರುವ ಹಳೇ ಬಸ್ ನಿಲ್ದಾಣದ ಮುಂಭಾಗದ ಸಾಮ್ರಾಟ್ ಹೋಟೆಲ್ ಹತ್ತಿರ ಒಳ ಚರಂಡಿಗೆ ಸ್ಲ್ಯಾಬ್ ಹಾಕದೆ ಮುಗ್ಧ ಜನರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸೋಮವಾರ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಜೀವನ ಗೌಡ ,ತಾಲ್ಲೂಕು ಅಧ್ಯಕ್ಷ ವಿಜಯ್ ಕುಮಾರ್ ಮತ್ತು ಕಾರ್ಯಕರ್ತರು ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಪುರಸಭೆಯ ನಿರ್ಲಕ್ಷ ಅಧಿಕಾರಿಗಳ ಬಗ್ಗೆ ಮಾಹಿತಿ ತಿಳಿಸಿದರು.

ತಕ್ಷಣ ಪುರಸಭೆ ಮುಖ್ಯಾಧಿಕಾರಿ ಅವರಿಗೆ ಕರೆ ಮಾಡಿ ಈ ಕೂಡಲೇ ಆ ಸಮಸ್ಯೆಯನ್ನು ಬಗೆಹರಿಸಿ ಎಂದು ಆದೇಶ ಹೊರಡಿಸಿದ್ದರು.

ಎಚ್ಚೆತ್ತುಕೊಂಡ ಪುರಸಭೆ ಅಧಿಕಾರಿಗಳು ಇಂದು ಒಳಚರಂಡಿಗೆ ಸ್ಲಾಬ್ ಹಾಕುವುದರಲ್ಲಿ ಮುಂದಾಗಿದ್ದಾರೆ.ಮನವಿಗೆ ಸ್ಪಂದಿಸಿದ ಉಪ ವಿಭಾಗಾಧಿಕಾರಿ ಡಾ. ಶೃತಿರವರಿಗೆ ಮಾನವ ಹಕ್ಕುಗಳ ರಕ್ಷಣಾ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *