
ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ನಡುವೆ ನಡೆಯುತ್ತಿರುವ ಯುದ್ಧದ ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಕೆಲ ಕಾಲ ಮಾತುಕತೆ ನಡೆಸಿದ್ದಾರೆ.
ಪ್ರಧಾನಿ ಮೋದಿಗೆ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮಾಡಿದ್ದ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಸಂಘರ್ಷದ ಕುರಿತು ಮಾತುಕತೆ ನಡೆಸಿದರು. ಈ ವೇಳೆ ಇಸ್ರೇಲ್ ಪ್ರಧಾನಿಗೆ ಮೋದಿ ಭಾರತವು ಇಸ್ರೇಲ್ ಜೊತೆ ಇದೆ ಎಂದು ಧೈರ್ಯ ತುಂಬಿದ್ದಾರೆ.
ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಟ್ವೀಟ್‌ನಲ್ಲಿ ಏನಿದೆ?:
ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ಕರೆ ಮಾಡಿದ್ದರು. ಈ ವೇಳೆ ಅಲ್ಲಿನ ಪರಿಸ್ಥಿತಿಗಳ ವಿವರವನ್ನು ತಿಳಿಸಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದಗಳು.
ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್ ಜೊತೆ ದೃಢವಾಗಿ ನಿಂತಿದ್ದಾರೆ.
ಭಾರತವು ಭಯೋತ್ಪಾದನೆಯನ್ನು ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.
