ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ, ಕಟ್ಟಡಗಳು ನಿರ್ಮಿಸಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಲಿದೆ’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸಂಪುಟ ಉಪಸಮಿತಿ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈವರೆಗೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿದ್ದ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ, ಕಟ್ಟಡಗಳನ್ನು ನಿರ್ಮಿಸಲು ಅನುಮತಿ ಇರಲಿಲ್ಲ.ಈ ವ್ಯಾಪ್ತಿಯಲ್ಲಿರುವ ಖಾಸಗಿ ಭೂಮಿಯಲ್ಲಿ ಫಾರಂ ಹೌಸ್‌, ರೆಸಾರ್ಟ್‌, ಸಾ ಮಿಲ್‌, ಪವನ ವಿದ್ಯುತ್‌ ಘಟಕಗಳನ್ನು ನಿರ್ಮಾಣ ಮಾಡಬಹುದು. ಅದಕ್ಕೆ ಅನುಮತಿ ದೊರೆಯಲಿದೆ’ ಎಂದರು.

ರಾಜ್ಯದಲ್ಲಿ ಸುಮಾರು 35 ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ಪೈಕಿ 29 ಪ್ರದೇಶಗಳಲ್ಲಿ ಇಂತಹ ಚಟುವಟಿಕೆಗಳಿಗೆ ಅನುಮತಿ ನೀಡಲು ಸಹಮತ ವ್ಯಕ್ತವಾಗಿತ್ತು. ನಾಗರಹೊಳೆ ಸೇರಿ ಇನ್ನೂ 6 ಪ್ರದೇಶಗಳಲ್ಲಿ ಈ ನಿಯಮವನ್ನು ಸಡಿಲಿಸುವ ಕುರಿತು ಸಹಮತ ವ್ಯಕ್ತವಾಗಿದೆ ಎಂದು ಅವರು ತಿಳಿಸಿದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed