ಸಕಲೇಶಪುರ :-ಪಟ್ಟಣದಲ್ಲಿ ಜೀವನೋಪಾಯಕ್ಕಾಗಿ ವ್ಯಾಪಾರ ಮಾಡಿಕೊಂಡಿರುವ ಬೀದಿ ಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಹಾಗೂ ಬೀದಿ ಬದಿ ವ್ಯಾಪಾರಿಗಳ ಸಂಘ ಗುರುವಾರ ಉಪವಿಭಾಗಾಧಿಕಾರಿಯವರಿಗೆ ಹಾಗೂ ಪುರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹಲವಾರು ವರ್ಷಗಳಿಂದ ಬಡವರಾದ ಬೀದಿ ಬದಿ ವ್ಯಾಪಾರಸ್ತರು ಜೀವನೋಪಾಯಕ್ಕಾಗಿ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸಿಕೊಂಡು ಬರುತ್ತಿದ್ದಾರೆ ಆದರೆ ಇದೀಗ ಪುರಸಭೆಯವರು ಏಕಯೇಕಿ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡಬಾರದು ಖಾಲಿ ಮಾಡುವಂತೆ ಪುರಸಭೆಯ ಅಧಿಕಾರಿಗಳು ಸೂಚನೆ ನೀಡಿರುವುದು ಸರಿಯಲ್ಲ ಎಂದು ವ್ಯಾಪಾರಸ್ತರು ತಮ್ಮ ನೋವನ್ನು ಎಸಿ ಅವರ ಬಳಿ ತೋಡಿಕೊಂಡರು .
ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಜಿಲ್ಲಾ ಕಾರ್ಯದರ್ಶಿ ಮಹೇಶ್,ಸಕಲೇಶಪುರ ತಾಲ್ಲೂಕು ಅಧ್ಯಕ್ಷ ವಿಜಯ್ ಕುಮಾರ್, ಕಾರ್ಯದರ್ಶಿ ಅನಿಲ್, ನಗರ ಅಧ್ಯಕ್ಷ ಸಂತೋಷ್ ಕುಮಾರ್, ಪ್ರದೀಪ್ ಮಾವಿನಹಳ್ಳಿ ಹಾಗೂ ಬೀದಿ ಬದಿಯ ವ್ಯಾಪಾರಿಗಳು ಇದ್ದರು.
I was looking at some of your content on this website and I believe this site is rattling informative!
Continue posting.Blog monry