ಸಕಲೇಶಪುರ: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಪಕ್ಷದ ಹಿರಿಯ ಮುತ್ಸದ್ದಿ ಬಿ ಎಸ್ ಯಡಿಯೂರಪ್ಪ ಅವರು ನಾಳೆ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಸಿಮೆಂಟ್ ಮಂಜು ಅವರ ಪರ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ನಾಳೆ ಬೆಳಿಗ್ಗೆ 9-30ಕ್ಕೆ ಪಟ್ಟಣದ ಸುಭಾಷ್ ಮೈದಾನಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದು ನಂತರ ಶ್ರೀ ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸುಮಾರು 15000 ಬಿಜೆಪಿ ಕಾರ್ಯಕರ್ತರು ಸೇರವ ನಿರೀಕ್ಷೆ ಇದ್ದು ಪಟ್ಟಣದ ಪ್ರಮುಖ ರಸ್ತೆಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಲ್ಲಿ ಭಾಗವಹಿಸಿ ನಂತರ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣಮಾಡಲಿದ್ದು ಈ ಕಾರ್ಯಕ್ರಮಕ್ಕೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಎಲ್ಲಾ ಮಹಾ ಜನತೆ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಪಕ್ಷದ ಆಲೂರು ತಾಲ್ಲೂಕು ಅದ್ಯಕ್ಷರಾದ ನಾಗರಾಜ್ ಅವರು tv46 ಮಲೆನಾಡು ಚಾನಲ್ ಗೆ ತಿಳಿಸಿದ್ದಾರೆ.

*ವರದಿ : ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್, ಸಂಪಾದಕರು : M. B. ಉಮೇಶ್, ಸಂಕಲನಕಾರ : ಮೋಹನ್ Fcc, ವ್ಯವಸ್ಥಾಪಕರು : ರಾಕೇಶ್. ಶೇಷಾದ್ರಿ*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *