
ಸಕಲೇಶಪುರ :-ತಾಲ್ಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಸಭೆಯು ಶಾಸಕರಾದ ಶ್ರೀ ಸಿಮೆಂಟ್ ಮಂಜುನಾಥ್ ರವರ ಉಪಸ್ಥಿತಿಯಲ್ಲಿ ಹಾಗೂ ಅಧ್ಯಕ್ಷರಾದ ಶ್ರೀ S D ಸತೀಶ್ ರವರ ಅದ್ಯಕ್ಷತೆಯಲ್ಲಿ ನಡೆಯಿತು. ನೋಡಲ್ ಅಧಿಕಾರಿಗಳಾಗಿ ಶ್ರೀ ಆದಿತ್ಯ H A ಸಹಾಯಕ ನಿರ್ದೇಶಕರು (ಗ್ರಾ.ಉ ) ರವರು ಹಾಜರಿದ್ದರು.
ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಶ್ರೀಮತಿ ಮಧುಮಣಿ, ಸಾ.ನ್ಯಾ. ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಬೈಕೆರೆ ದೇವರಾಜು, ಗ್ರಾಮ ಪಂಚಾಯಿತಿಯ ಎಲ್ಲಾಸದಸ್ಯರು, ಗ್ರಾಮಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಸ್ವಸಹಾಯ ಸಂಘ ಮತ್ತು ಬೆಳೆಗಾರರ ಸಂಘದ ಪದಾಧಿಕಾರಿಗಳು, ಮಾಧ್ಯಮ ಮಿತ್ರರು, ಸಿಬ್ಬಂದಿ ವರ್ಗದವರು ಮತ್ತಿತರರು ಭಾಗವಹಿಸಿದ್ದರು.
ಇದೇ ಸಮಯದಲ್ಲಿ ಬಿರಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಾಡಕಛೇರಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಮತ್ತು ಟೋಕನ್ ವಿತರಣೆ ಯಂತ್ರಕ್ಕೆ ಮಾನ್ಯ ಶಾಸಕರು ಚಾಲನೆ ನೀಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಮತ್ತು ಶಾಲೆಗಳಿಗೆ ಸಂವಿಧಾನ ಪೀಠಿಕೆಯನ್ನು ಮತ್ತು ಶೇ 25 ರ ವೆಚ್ಚದ ಫಲಾನುಭವಿಗಳಿಗೆ ಚೆಕ್ ಮೂಲಕ ಸೌಲಭ್ಯವನ್ನು ವಿತರಿಸಲಾಯಿತು.
