
ಹಾಸನದ ಕಾರೇಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ಬಿ. ಎಸ್. ಸಿ (ಹಾನ್ಸ್) ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಅರಸೀಕೆರೆ ತಾಲ್ಲೂಕು ಗಂಡಸಿ ಹೋಬಳಿಯ ಕುಡುಕುಂದಿ ಗ್ರಾಮದಲ್ಲಿ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವನ್ನು ಕೈಗೊಂಡರು.
ಕುಡುಕುಂದಿ ಗ್ರಾಮದ ಅಂಗನವಾಡಿ, ಸಮುದಾಯ ಭವನ ಮತ್ತು ಹಾಲಿನ ಡೈರಿ ಸೇರಿದಂತೆ ಗ್ರಾಮದ ಪ್ರಮುಖ ಸ್ಥಳದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡು ಗ್ರಾಮಸ್ಥರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು.
ಈ ಕಾರ್ಯಕ್ರಮದಲ್ಲಿ ಕೃಷಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರುಗಳಾದ ಡಾ. ಅರವಿಂದ ಕುಮಾರ್, ಎಂ. ಕೆ., ಡಾ. ಶಿವಬಸಪ್ಪ, ಡಾ. ನವೀನ್ ಕುಮಾರ್,ಪಿ. ಹಾಗೂ ಅವಿನಾಶ್,ಎಲ್, ಆರ್. ಹಾಜರಿದ್ದರು.
ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
