ಶಾಸಕಾಂಗ ಪಕ್ಷದ ನಾಯಕರಾಗಿರುವ ಹೆಚ್​ ಡಿ ಕುಮಾರಸ್ವಾಮಿ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಸೇರಿದಂತೆ ಜೆಡಿಎಸ್ ರಾಜ್ಯ ಕಾರ್ಯಕಾರಿಣಿಯನ್ನು ವಿಸರ್ಜಸಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​ ಡಿ ದೇವೇಗೌಡ ಆದೇಶಿಸಿದ್ದಾರೆ.

ಸಭೆಯ ನಂತರ ದೇವೇಗೌಡರು ಮಾಧ್ಯಮಗೋಷ್ಠಿ ನಡೆಸಿ ಪಕ್ಷದ ರಾಜ್ಯ ಕಾರ್ಯಕಾರಣಿ ವಿಸರ್ಜಿಸಿ ಆದೇಶ ಪ್ರಕಟಿಸಿದರು.

ಶಾಸಕಾಂಗ ಪಕ್ಷದ ನಾಯಕರಾಗಿರುವ ಹೆಚ್​ ಡಿ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿಸಲು ನಾವೆಲ್ಲ ಒಟ್ಟಾಗಿ ಸೇರಿ ಸರ್ವಾನುಮತದಿಂದ ತೀರ್ಮಾನಿಸಿದ್ದೇವೆ.

ಹಾಗೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಸೇರಿದಂತೆ ಜೆಡಿಎಸ್ ರಾಜ್ಯ ಕಾರ್ಯಕಾರಿಣಿ ವಿಸರ್ಜಿಸಿರುವುದಾಗಿ ಪಕ್ಷದ ವರಿಷ್ಠ ದೇವೇಗೌಡರು ತಿಳಿಸಿದರು.

ಜೆಡಿಎಸ್ ಪಕ್ಷದ ಸಂವಿಧಾನ ಮತ್ತು ನಿಯಮಗಳ ಅಡಿ ಆರ್ಟಿಕಲ್ (10) ಪ್ರಕಾರ ಕರ್ನಾಟಕ ಪ್ರದೇಶ ಜನತಾದಳ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿಣಿ ಸಮಿತಿಯ ಪದಾಧಿಕಾರಿಗಳನ್ನು ಈ ಕೂಡಲೇ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದೆ.

ಹಾಗೆಯೇ ಪಕ್ಷದ ಕಾರ್ಯಚಟುವಟಿಕೆಗಳು ಸುಲಲಿತವಾಗಿ ನಡೆಸಿಕೊಂಡು ಹೋಗಲು ಹೆಚ್ ಡಿ ಕುಮಾರಸ್ವಾಮಿ ಅವರನ್ನು ಅಡಹಾಕ್ ಅಧ್ಯಕ್ಷನ್ನಾಗಿ ನೇಮಕ ಮಾಡಲಾಗಿದೆ ಎಂದು ಜೆಡಿಷ್ಠ ವರಿಷ್ಠ ಮಾಧ್ಯಮಗೋಷ್ಠಿಯಲ್ಲಿ ಪ್ರಕಟಿಸಿದರು.

ಜೆಡಿಎಸ್ ರಾಜ್ಯ ಕಾರ್ಯಕಾರಣಿ ವಿಸರ್ಜನೆ ಆದೇಶದಿಂದಾಗಿ ಸಿಎಂ ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಪದವಿ ಕಳೆದುಕೊಂಡಿದ್ದಾರೆ.

ನನ್ನದೇ ಒರಿಜಿನಲ್ ಜೆಡಿಎಸ್ ಎಂದು ಸಿ ಎಂ ಇಬ್ರಾಹಿಂ ಅವರು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಈ ಮೊದಲು ಕಿಡಿಕಾರಿದ್ದರು.

ಈ ಹಿನ್ನೆಲೆಯಲ್ಲಿ ಸಿ ಎಂ ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳೂವಂತೆ ಪಕ್ಷದಲ್ಲಿ ಒತ್ತಾಯ ಕೇಳಿಬಂದಿತ್ತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *